ಸುಂಟಿಕೊಪ್ಪ, ಡಿ. 28: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸ್ವಸಹಾಯ ಸಂಘದ ಮಹಿಳಾ ಸದಸ್ಯರಿಗೆ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಮಹಿಳಾ ವಿಚಾರಗೋಷ್ಠಿ ನಡೆಸಲಾಯಿತು.

ಕಂಬಿಬಾಣೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಸಮಾರಂಭಕ್ಕೆ ಮೀರಾ ಗಂಗಾಧರ್ ಚಾಲನೆ ನೀಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಪ್ರಕಾಶ್ ಮಾತನಾಡಿ, ಮಹಿಳೆಯರು ಇಂದು ಎಲ್ಲಾ ಕ್ಷೇತ್ರದಲ್ಲೂ ಮುಂದುವರೆದಿದ್ದಾರೆ ಎಂದರು.

ವೇದಿಕೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಂಟಿಕೊಪ್ಪ ವಲಯ ಮೇಲ್ವಿಚಾರಿಕಿ ಕಾಂತಿಕಾ ಮಣಿ, ಜ್ಞಾನ ವಿಕಾಸ ಸಮಾನ್ವಯಾಧಿಕಾರಿ ಪದ್ಮ, ಒಕ್ಕೂಟದ ಪದಾಧಿಕಾರಿ ಶೋಭಾ ಸೇವಾ ಪ್ರತಿನಿಧಿ ಚಿದಾನಂದ ಉಪಸ್ಥಿತರಿದ್ದರು.

ಶ್ರೇಯಾ ಜ್ಞಾನ ವಿಕಾಸ ಕೇಂದ್ರದ ಸದಸ್ಯರು ಸಾಂಸ್ಕøತಿಕ ಚಟುವಟಿಕೆಯನ್ನು ನಡೆಸಿಕೊಟ್ಟರು.