ಸುಂಟಿಕೊಪ್ಪ, ಡಿ. 27: ವಿದ್ಯಾರ್ಥಿಗಳಲ್ಲಿ ಶಿಸ್ತು ಸೇವಾ ಮನೋಭಾವನೆ, ಹಾಗೂ ರಾಷ್ಟ್ರೀಯ ಭಾವೈಕ್ಯತೆ ಮೈಗೂಡಿಸಿಕೊಳ್ಳಬೇಕೆಂದು ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ ಹೇಳಿದರು.

ಐಗೂರು ಗ್ರಾಮ ಪಂಚಾಯಿತಿ ಯಡವಾರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರಪೇಟೆ ಸಂತ ಜೋಸೆಫರ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು ವ್ಯಕ್ತಿತ್ವ ವಿಕಸನಕ್ಕೆ ಎನ್‍ಎಸ್‍ಎಸ್ ಸಹಕಾರಿಯಾಗಲಿದೆ ಎಂದು ಹೇಳಿದರು.

ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಚೆನ್ನಿಕುರಿಯನ್ ವಿದ್ಯಾರ್ಥಿಗಳಿಗೆ ಹಿತವಚನ ನೀಡಿದರು.

ಅತಿಥಿಗಳಾಗಿ ಐಗೂರು ಗ್ರಾಮ ಪಂಚಾಯಿತಿ ಸದಸ್ಯ ಡಿ.ಎಸ್.ಚಂಗಪ್ಪ ಕಾಫಿ ಬೆಳೆಗಾರರಾದ ಲಿಂಗೇರಿ ರಾಜೇಶ, ಪ್ರವೀಣ್‍ರಾಜ್ ಅರಸ್, ಯಡವಾರೆ ಸರಕಾರಿ ಶಾಲೆಯ ಮುಖ್ಯೋಪಾದ್ಯಾಯ ವೈಸಿ ಕುಮಾರ್ ಹಾಜರಿದ್ದರು.

ಶಿಬಿರದ ನೆನಪಿಗಾಗಿ ಸಜ್ಜಳ್ಳಿ ಗಿರಿಜನ ಹಾಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಡಾ. ಚೇತನ್ ನೇತೃತ್ವದಲ್ಲಿ ಏರ್ಪಡಿಸಲಾಗಿತ್ತು.

ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಆನಂದ್ ಬಿ.ಜಿ., ಸಹಶಿಬಿರಾಧಿಕಾರಿ ಶಿಲ್ಪಾ, ಅನುಪಲ್ಲವಿ, ಶೋಭಾ ಶಿಬಿರವನ್ನು ಯಶಸ್ವಿಯಾಗಿ ನಡೆಸಿಕೊಟ್ಟರು.