ಕೂಡಿಗೆ, ಡಿ. 27: ಕೂಡುಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಬಸನತ್ತೂರು ಗ್ರಾಮದ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಹಾರಂಗಿ ನದಿ ದಡದ ರುದ್ರ ಭೂಮಿಯನ್ನು ನಿರ್ಮಾಣ ಮಾಡಲಾಗಿದೆ. ಅಲ್ಲಿಗೆ ಹೋಗುವ ದಾರಿ ಒತ್ತುವರಿ ಆಗಿರುವದರಿಂದ ಅದನ್ನು ತೆರವುಗೊಳಿಸಿ ಸಾರ್ವಜನಿಕರು ತಿರುಗಾಡಲು ದಾರಿ ಮಾಡಿಕೊಂಡಬೇಕೆಂದು ಈ ವ್ಯಾಪ್ತಿಯ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ಅನೇಕ ಬಾರಿ ಪಂಚಾಯಿತಿಗೆ ಅರ್ಜಿ ಸಲ್ಲಿಸಿದರೂ ಇದುವರಗೆ ಯಾವದೇ ಪ್ರಯೋಜನ ಕೈಗೊಂಡಿಲ್ಲವೆಂದು ಇಲ್ಲಿನ ಪ್ರಮುಖ ಮಂಜುನಾಥ, ದಾಸ್, ರವಿ, ನವೀನ ಸೇರಿದಂತೆ ವಿವಿಧ ಸಂಘಟನೆಯ ಪ್ರಮುಖರು ಒತ್ತಾಯಿಸಿದ್ದಾರೆ. ಈ ವಿಷಯವಾಗಿ ಕಂದಾಯ ಇಲಾಖೆಯ ಅಧಿಕಾರಿ ವರ್ಗದವರು ಸ್ಥಳ ಪರಿಶೀಲನೆ ನಡೆಸಿದ್ದು, ಅಧಿಕಾರಿಗಳು ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.