ನಾಪೋಕ್ಲು, ಡಿ. 28: ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತನ್ನು ಬೆಳೆಸಿಕೊಳ್ಳುವದು ಅಗತ್ಯ. ಇಂದಿನ ಮಕ್ಕಳು ದೇಶದ ಪ್ರಗತಿಗೆ ರಾಷ್ಟ್ರೀಯ ಸೇವಾ ಯೋಜನೆಯ ಮೂಲಕ ಸೇವೆ ಸಲ್ಲಿಸಬೇಕು ಎಂದು ನಿವೃತ್ತ ಕೃಷಿ ವಿಜ್ಞಾನಿ ಡಾ. ಬೊಪ್ಪಂಡ ಜಾಲಿ ಬೋಪಯ್ಯ ಹೇಳಿದರು.
ನಾಪೋಕ್ಲು ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಬೇತು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾದ ವಿಶೇಷ ವಾರ್ಷಿಕ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಪಂಚಾಯಿತಿ ಸದಸ್ಯ ಪಾಡಿಯಮ್ಮಂಡ ಮುರಳಿ ಕರುಂಬಮ್ಮಯ್ಯ, ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಶಿವಚಾಳಿಯಂಡ ಅಂಬಿ ಕಾರ್ಯಪ್ಪ ಕೇಟೋಳಿರ ಹರೀಶ್ ಪೂವಯ್ಯ, ಟಿ.ಎಲ್. ಓಂಪ್ರಕಾಶ್, ಎ.ಆರ್. ಅಸ್ಮತ್, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಬಿದ್ದಾಟಂಡ ರಮೇಶ್ ಚೆಂಗಪ್ಪ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲೆ ಡಾ. ಕಾವೇರಿ ಪ್ರಕಾಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಎಲ್.ಸಿ. ರಂಗಸ್ವಾಮಿ ಹಾಗೂ ಪ್ರಾಧ್ಯಾಪಕ ವೃಂದದವರು ಪಾಲ್ಗೊಂಡಿದ್ದರು.