ಶ್ರೀಮಂಗಲ, ಡಿ. 27: ಬಿರುನಾಣಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 18 ವರ್ಷಕ್ಕೂ ಅಧಿಕ ಕಾಲ ಸೇವೆ ಸಲ್ಲಿಸಿದ್ದ ಆರೋಗ್ಯ ಅಧಿಕಾರಿ ಡಾ. ಎಸ್.ಸಿ. ದೇವರಾಜ್ (48) ಅವರು, ಅನಾರೋಗ್ಯದಿಂದ ತಾ. 26 ರಂದು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಅವರ ಅಂತ್ಯಕ್ರಿಯೆ ಗುರುವಾರ ಮಂಡ್ಯ ಜಿಲ್ಲೆಯ ಶಿವರಾ ಗ್ರಾಮದಲ್ಲಿ ನಡೆಯಿತು.
ಅವರು ಬಿರುನಾಣಿ ಆರೋಗ್ಯ ಕೇಂದ್ರದಲ್ಲಿ ಸೇವೆ ಸಲ್ಲಿಸುತ್ತಿದ್ದ ವೇಳೆ ಅನಾರೋಗ್ಯಕ್ಕೆ ತುತ್ತಾಗಿ ಕಳೆದ ಒಂದು ವರ್ಷದಿಂದ ರಜೆಯಲ್ಲಿದ್ದರು.
ಮೃತರು ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಅವರ ನಿಧನಕ್ಕೆ ಬಿರುನಾಣಿ ವ್ಯಾಪ್ತಿಯ ನಾಗರಿಕರು ಸಂತಾಪ ವ್ಯಕ್ತಪಡಿಸಿದ್ದಾರೆ.