ಮಡಿಕೇರಿ, ಡಿ.29 : ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕದ ವತಿಯಿಂದ ತಾ.30 ರಂದು (ಇಂದು) ಪ್ರತಿಭಾವಂತ ದಲಿತ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭವನ್ನು ಆಯೋಜಿಸಲಾಗಿದೆ ಎಂದು ಸಮಿತಿಯ ಜಿಲ್ಲಾ ಸಂಚಾಲಕÀ ಹೆಚ್.ಎಲ್. ದಿವಾಕರ್ ತಿಳಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು, 30ನೇ ವರ್ಷದ ಸನ್ಮಾನ ಸಮಾರಂಭ ಭಾನುವಾರ ಬೆಳಗ್ಗೆ 11.30ಕ್ಕೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆಯಲಿದೆ ಎಂದು ಹೇಳಿದ್ದಾರೆ. ತಮ್ಮ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಜಿ.ಪಂ.ಮುಖ್ಯ ಕಾರ್ಯನಿರ್ವಹ ಣಾಧಿಕಾರಿ ಕೆ.ಲಕ್ಷ್ಮೀಪ್ರಿಯ ಉದ್ಘಾಟಿಸಲಿದ್ದಾರೆ.

ಮುಖ್ಯ ಭಾಷಣಕಾರರಾಗಿ ಜಿಲ್ಲಾ ಕಾರಾಗೃಹದ ಅಧೀಕ್ಷಕ ವಿ. ಕೃಷ್ಣಮೂರ್ತಿ ಭಾಗವಹಿಸಲಿದ್ದು, ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ. ಪೆನ್ನೇಕರ್, ಜಿಲ್ಲಾ ಆಸ್ಪತ್ರೆಯ ಉಪ ಮುಖ್ಯ ವೈದ್ಯಾಧಿಕಾರಿ ಹೆಚ್. ವಿ. ದೇವದಾಸ್, ಮಡಿಕೇರಿ ರಾಜರಾಜೇಶ್ವರಿ ದೇವಾಲಯದ ಧರ್ಮಾಧಿಕಾರಿಗಳಾದ ಹೆಚ್.ಎಸ್. ಗೋವಿಂದಸ್ವಾಮಿ ವಿದ್ಯಾರ್ಥಿಗಳನ್ನು ಸನ್ಮಾನಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮಡಿಕೇರಿ ತಾ.ಪಂ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮೀ ಚಂದ್ರಶೇಖರ್, ಮಡಿಕೇರಿ ಲಯನ್ಸ್ ಕ್ಲಬ್‍ನ ಅಧ್ಯಕ್ಷ ಕೆ.ಕೆ. ದಾಮೋದರ್, ಗಾಳಿಬೀಡಿನ ಬೆಳೆಗಾರರು ಹಾಗೂ ಸಮಾಜ ಸೇವಕÀ ಟಿ.ಆರ್.ವಾಸುದೇವ್, ಮಡಿಕೇರಿಯ ಲೆಕ್ಕ ಪರಿಶೋಧಕÀ ಟಿ.ಕೆ.ಸುಧೀರ್, ವೀರಾಜಪೇಟೆಯ ದ.ಸಂ.ಸಮಿತಿಯ ವಿಭಾಗೀಯ ಸಂಚಾಲಕ ಎನ್. ವೀರಭದ್ರಯ್ಯ, ಮಡಿಕೇರಿ ತಾಲೂಕು ಸಂಚಾಲಕÀ ಎ.ಪಿ.ದೀಪಕ್, ಉದ್ಯಮಿ ಶರಿನ್ ಪಾಲ್ಗೊಳ್ಳಲಿದ್ದಾರೆ ಎಂದು ದಿವಾಕರ್ ತಿಳಿಸಿದ್ದಾರೆ.