ನಾಪೆÉÇೀಕ್ಲು, ಡಿ. 29: ಯಾವದೇ ಒಂದು ಸಮಾಜ, ಸಂಸ್ಥೆ ಅಭಿವೃದ್ಧಿಯಾಗಬೇಕಾದರೆ ಸರ್ವರು ಸಹಕಾರ ನೀಡಿದರೆ ಮಾತ್ರ ಸಾಧ್ಯ ಎಂದು ಇಲ್ಲಿನ ಕೊಡವ ಸಮಾಜದ ಅಧ್ಯಕ್ಷ ಬಿದ್ದಾಟಂಡ ರಮೇಶ್ ಚಂಗಪ್ಪ ಹೇಳಿದರು.

ನಾಪೆÉÇೀಕ್ಲು ಕೊಡವ ಸಮಾಜದ ವಾರ್ಷಿಕ ಮಹಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಮಾಜವು ಈಗಾಗಲೆ ಅಭಿವೃದ್ಧಿಯತ್ತ ಸಾಗುತ್ತಿದೆ. ನೂತನ ಸಭಾಂಗಣವನ್ನು ನಿರ್ಮಿಸಲಾಗುತ್ತಿದ್ದು, ಇದರ ಉದ್ಘಾಟನೆಯನ್ನು ಸದ್ಯದಲ್ಲಿಯೇ ಮಾಡಲಾಗುವದು ಎಂದರು.

ವಾರ್ಷಿಕವಾಗಿ ಸದಸ್ಯರ ಮಕ್ಕಳಿಗೆ ವಿದ್ಯಾಭ್ಯಾಸದ ಸಲುವಾಗಿ ಪೆÇ್ರೀತ್ಸಾಹ ಧನವನ್ನು ನೀಡುತ್ತಾ ಬಂದಿರುತ್ತೇವೆ. ಕೊಡವ ಸಮಾಜದ ವತಿಯಿಂದ ನಾಲ್ಕುನಾಡು ಕೊಡವ ಸೌಹಾರ್ದ ಬ್ಯಾಂಕನ್ನು ಸ್ಥಾಪಿಸಲಾಗಿದ್ದು, ಸದಸ್ಯತ್ವವನ್ನು ಪಡೆದು ಕೊಂಡು ಇದರ ಪ್ರಯೋಜನವನ್ನು ಪಡೆದು ಕೊಳ್ಳುವಂತೆ ಕೋರಿದರು.

ಸಮಾಜದ ನೂತನ ಆಡಳಿತ ಮಂಡಳಿಗೆ ಮಾರ್ಚ್ ತಿಂಗಳಲ್ಲಿ ಚುನಾವಣೆ ನಡೆಸಲಾಗುವದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕೊಡವ ಸಮಾಜದ ಉಪಾಧ್ಯಕ್ಷ ಮಾಳೆಯಂಡ ಅಯ್ಯಪ್ಪ, ಕಾರ್ಯದರ್ಶಿ ಮಂಡಿರ ರಾಜಪ್ಪ, ಖಜಾಂಚಿ ಅಪ್ಪಾರಂಡ ಸುಧೀರ್ ಅಯ್ಯಪ್ಪ, ಸಹ ಕಾರ್ಯದರ್ಶಿ ಕನ್ನಂಬಿರ ಸುಧಿ ತಿಮ್ಮಯ್ಯ, ಪೆÇಮ್ಮಕ್ಕಡ ಪರಿಷತ್ ಅಧ್ಯಕ್ಷೆ ಮೂವೇರ ರೇಖಾ ಪ್ರಕಾಶ್, ನಿರ್ದೇಶಕರು ಮತ್ತು ಸದಸ್ಯರು ಇದ್ದರು.