ಗುಡ್ಡೆಹೊಸೂರು, ಡಿ. 29: ಇಲ್ಲಿನ ಸಮುದಾಯ ಭವನದಲ್ಲಿ ಕೃಷಿ ಅಭಿಯಾನ ನಡೆಯಿತು. ಕೃಷಿ ಇಲಾಖೆ, ಜಿಲ್ಲಾ ಪಂಚಾಯಿತಿ ವತಿಯಿಂದ ಏರ್ಪಡಿಸಲಾಗಿದ್ದ ಕಾರ್ಯಕ್ರಮ ಪಂಚಾಯಿತಿ ಅಧ್ಯಕ್ಷೆ ಕೆ.ಎಸ್. ಭಾರತಿ ಅಧ್ಯಕ್ಷತೆಯಲ್ಲಿ ನಡೆಯಿತು.

ಜಿ.ಪಂ. ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷೆ ಸರೋಜಮ್ಮ ಕಾರ್ಯಕ್ರಮ ಉದ್ಘಾಟಿಸಿದರು. ಸಹಾಯಕ ಕೃಷಿ ನಿರ್ದೇಶಕ ಡಾ. ರಾಜಶೇಖರ್ ಪ್ರಾಸ್ತಾವಿಕ ನುಡಿಯಾಡಿದರು. ವೇದಿಕೆಯಲ್ಲಿ ಜಿ.ಪಂ. ಸದಸ್ಯೆ ಮಂಜುಳ, ತಾ.ಪಂ. ಸದಸ್ಯ ಗಣೇಶ್ ಹಾಗೂ ನಂಜರಾಯಪಟ್ಟಣ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಮುರಳಿಮಾದಯ್ಯ ಹಾಜರಿದ್ದು ತಮ್ಮ ಸಂಘದಲ್ಲಿ ರೈತರಿಗೆ ದೊರೆಯುವ ಸೌಲಭ್ಯದ ಬಗ್ಗೆ ತಿಳಿಸಿದರು.

ಗೋಣಿಕೊಪ್ಪದ ಕೆ.ವಿ.ಕೆ.ಯ ಹಿರಿಯ ವಿಜ್ಞಾನಿ ವಿರೇಂದ್ರಕುಮಾರ್ ಕೃಷಿ ಬಗ್ಗೆ ಉಪನ್ಯಾಸ ನೀಡಿದರು. ಚೆಟ್ಟಳ್ಳಿಯ ತೋಟಗಾರಿಕಾ ಸಂಶೋಧನಾ ಕೇಂದ್ರದ ವಿಜ್ಞಾನಿ ಡಾ. ವೆಂಕಟರಮಣಪ್ಪ ತೋಟಗಾರಿಕಾ ಬೆಳೆಗಳ ಬಗ್ಗೆ ಮಾಹಿತಿ ನೀಡಿದರು. ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಪೂಣಚ್ಚ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿದರು. ಕೃಷಿ ಅಧಿಕಾರಿ ಮುಕುಂದ ವಂದಿಸಿದರು.

ರೈತರು ಬೆಳೆದ ಕೃಷಿ ಬೆಳೆಗಳು ಮತ್ತು ಕೃಷಿ ಉತ್ಪನ್ನಗಳ ಪ್ರದರ್ಶನ ನಡೆಯಿತು. ವೇದಿಕೆಯಲ್ಲಿ ಡಾ. ದಿವ್ಯ, ಗುಡ್ಡೆಹೊಸೂರು ಪಿ.ಡಿ.ಓ. ಶ್ಯಾಂ ಮತ್ತು ಪಂಚಾಯಿತಿ ಸದಸ್ಯರು ಉಪಸ್ಥಿತರಿದ್ದರು. ಮಡಿಕೇರಿಯ ಎಫ್.ಎಂ.ಸಿ. ಕಾಲೇಜಿನ ಜಸ್ಮೀತಾ ಮತ್ತು ತಂಡದವರು ಪ್ರಾರ್ಥಿಸಿದರು.