ಮಡಿಕೇರಿ, ಡಿ. 29: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಯು ರಿಸರ್ಚ್ ಮೆತೊಡಾಲಜಿ ಅಂಡ್ ಡಾಟಾ ಅನಾಲಿಸಿಸ್ ಯೂಸಿಂಗ್ ಸ್ಟಾಟಿಸ್ಟಿಕಲ್ ಟೂಲ್ಸ್ ಎಂಬ ವಿಷಯದ ಮೇಲೆ 2019ನೇ ಜನವರಿ 2 ರಿಂದ ಮೂರು ದಿನಗಳ ಕಾರ್ಯಾಗಾರವನ್ನು ಅಕಾಡೆಮಿ ಕಚೇರಿಯಲ್ಲಿ (ಪ್ರೊ.ಯು.ಆರ್.ರಾವ್ ವಿಜ್ಞಾನ ಭವನ, ಮೇ.ಸಂದೀಪ್ ಉನ್ನೀಕೃಷ್ಣನ್ ರಸ್ತೆ, ತೋಟಗಾರಿಕಾ ವಿಜ್ಞಾನಗಳ ಕಾಲೇಜು ಆವರಣ, ಜಿಕೆವಿಕೆ, ದೊಡ್ಡ ಬೆಟ್ಟಹಳ್ಳಿ ಲೇಯೊಟ್, ವಿದ್ಯಾರಣ್ಯಪುರ ಅಂಚೆ, ಬೆಂಗಳೂರು-560097) ಆಯೋಜಿಸಲಾಗಿದೆ.

ಈ ಕಾರ್ಯಾಗಾರದಲ್ಲಿ ಪ್ರತಿನಿಧಿಗಳಾಗಿ ರಾಜ್ಯಾದ್ಯಂತ ಸ್ನಾತಕೋತ್ತರ ವಿಜ್ಞಾನ ಪದವಿ ಮತ್ತು ಇಂಜಿನಿಯರಿಂಗ್ ಕಾಲೇಜು ಅಧ್ಯಾಪಕರು ಹಾಗೂ ಯುವ ಸಂಶೋಧನಾ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ. ಈ ಕಾರ್ಯಾಗಾರಕ್ಕೆ ಪ್ರವೇಶ ದರ ಸ್ನಾತಕ್ಕೋತ್ತರ ವಿದ್ಯಾರ್ಥಿಗಳು ರೂ.100 ಹಾಗೂ ಅಧ್ಯಾಪಕರಿಗೆ/ಸಂಶೋಧನಾ ವಿದ್ಯಾರ್ಥಿಗಳಿಗೆ ರೂ.200 ಗಳಾಗಿದ್ದು, ಮೊದಲು ನೋಂದಾಯಿಸಿಕೊಂಡವರಿಗೆ ಹೆಚ್ಚಿನ ಆದ್ಯತೆಯನ್ನು ನೀಡಲಾಗುವದು. ಕಾರ್ಯಾಗಾರದಲ್ಲಿ ಪ್ರತಿನಿಧಿಗಳಾಗಿ ನೋಂದಾಯಿಸಿಕೊಳ್ಳಲು ತಾ. 31 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಅಕಾಡೆಮಿಯ ವೆಬ್‍ಸೈಟ್ hಣಣಠಿ://ತಿತಿತಿ.ಞsಣಚಿಛಿಚಿಜemಥಿ.iಟಿ ಹಾಗೂ ವೈಜ್ಞಾನಿಕಾಧಿಕಾರಿಯಾದ ವಿ.ಕೆ. ಶ್ರೀನಿವಾಸು ದೂರವಾಣಿ ಸಂಖ್ಯೆ 9620767819 ನ್ನು ಸಂಪರ್ಕಿಸಬಹುದಾಗಿದೆ.