ಸಿದ್ದಾಪುರ, ಡಿ. 29: ತಾ. 31 ರಂದು ಕೊಂಡಂಗೇರಿಯ ಎಲಿಯಂಗಾಡ್‍ನಲ್ಲಿ ಜಿಲ್ಲಾಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟವನ್ನು ಏರ್ಪಡಿಸಲಾಗಿದೆ ಎಂದು ಎಲಿಯಂಗಾಡ್ ಫ್ರೆಂಡ್ಸ್ ಯುವಕ ಸಂಘದ ಅಧ್ಯಕ್ಷ ಅಂದಾಯಿ ಅಬ್ದುಲ್ ರೆಹಮಾನ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಮಡಿಕೇರಿ, ನೆಹರು ಯುವಕೇಂದ್ರ ಮಡಿಕೇರಿ ಹಾಗೂ ಎಲಿಯಂಗಾಡ್ ಫ್ರೆಂಡ್ಸ್ ಯುವಕ ಸಂಘ ಕೊಂಡಂಗೇರಿ ಇವರ ಸಂಯುಕ್ತ ಆಶ್ರಯದಲ್ಲಿ ಹೊಸ ವರ್ಷದ ಪ್ರಯುಕ್ತ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟವನ್ನು ಎಲಿಯಂಗಾಡ್ ಮೈದಾನದಲ್ಲಿ ಏೀರ್ಪಡಿಸಲಾಗಿದ್ದು, ಮಧ್ಯಾಹ್ನ 2 ಗಂಟೆಯಿಂದ ಪಂದ್ಯಾವಳಿ ಆರಂಭವಾಗಲಿದೆ. ಸಂಜೆ 7 ಗಂಟೆಗೆ ವಿಶೇಷ ಸಮಾರಂಭ ನಡೆಯಲಿದ್ದು, ರಾಜಕೀಯ, ಸಾಮಾಜಿಕ, ಕ್ರೀಡಾ ಕ್ಷೇತ್ರದ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು. ವಿಜೇತ ತಂಡಗಳಿಗೆ ಆಕರ್ಷಕ ನಗದು ಬಹುಮಾನ ಹಾಗೂ ಟ್ರೋಫಿಯನ್ನು ನೀಡಲಿದ್ದು, ಆಸಕ್ತ ತಂಡಗಳು 9449277317, 9741448465, 8971316724 ಸಂಖ್ಯೆಗೆ ಸಂಪರ್ಕಿಸಲು ಕೋರಿದ್ದಾರೆ. ಗೋಷ್ಠಿಯಲ್ಲಿ ಸಂಘದ ಪದಾಧಿಕಾರಿಗಳಾದ ರಿಯಾಜ್, ಆಲಿ ಇದ್ದರು.