ಮಡಿಕೇರಿ, ಡಿ. 30 : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನಡೆಸುತ್ತಿರುವ ಕ್ರೀಡಾ ಶಾಲೆ, ಕ್ರೀಡಾ ನಿಲಯಗಳಿಗೆ 2019-20ನೇ ಸಾಲಿಗೆ ಪ್ರತಿಭಾನ್ವಿತ ಕ್ರೀಡಾಪಟುಗಳ ಆಯ್ಕೆಯು ಜ.2 ರಂದು ಸೋಮವಾರಪೇಟೆ ತಾಲೂಕಿನ ಕೂಡಿಗೆ ಸರ್ಕಾರಿ ಕ್ರೀಡಾ ಪ್ರೌಢಶಾಲಾ ಕ್ರೀಡಾಂಗಣದಲ್ಲಿ, ಜ.3 ರಂದು ವೀರಾಜಪೇಟೆ ತಾಲೂಕಿನ ಪೊನ್ನಂಪೇಟೆ ತಾಲೂಕು ಮಿನಿ ಕ್ರೀಡಾಂಗಣದಲ್ಲಿ ಹಾಗೂ ಜ.4 ರಂದು ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.