ಸೋಮವಾರಪೇಟೆ, ಡಿ. 30: ಇಲ್ಲಿನ ಸೋಮೇಶ್ವರ ದೇವಾಲಯದಲ್ಲಿ ದತ್ತ ಜಯಂತಿ ಹಾಗೂ ಗುರುವಂದನೆ ಕಾರ್ಯಕ್ರಮ ಶ್ರದ್ಧಾಭಕ್ತಿಯಿಂದ ನಡೆಯಿತು.

ದೇವಾಲಯದ ಪ್ರಧಾನ ಅರ್ಚಕ ಪ್ರಸನ್ನ ಭಟ್ ನೇತೃತ್ವದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ನೆರವೇರಿದವು. ದೇವಿ ಬಳಗ ಮತ್ತು ಮಾತಾ ಬಳಗದ ಸದಸ್ಯರಿಂದ ಭಜನಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ದೇವಾಲಯ ಸಮಿತಿ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್, ಕಾರ್ಯದರ್ಶಿ ಎಸ್.ಡಿ. ವಿಜೇತ್, ಪದಾಧಿಕಾರಿಗಳಾದ ಸುದರ್ಶನ್, ಕೌಶಿಕ್, ರಾಜೇಶ್, ರವಿಶಂಕರ್, ಶ್ಯಾಮ್‍ಸುಂದರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.