ವೀರಾಜಪೇಟೆ, ಡಿ. 30: ವೀರಾಜಪೇಟೆ ಮಲೆತಿರಿಕೆ ಬೆಟ್ಟದಲ್ಲಿರುವ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಮಂಡಲಪೂಜೆಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಮಂಡಲ ಪೂಜೆ ಪ್ರಯುಕ್ತ ಬೆಳಗ್ಗಿನಿಂದಲೇ ಅಯ್ಯಪ್ಪ ಸ್ವಾಮಿಗೆ ವಿಶೇಷ ಪೂಜೆ, ಅಭಿಷೇಕ ಹಾಗೂ ಪಡಿಪೂಜೆ, ಪುನಸ್ಕಾರಗಳು ಸಾಂಪ್ರದಾಯಿಕವಾಗಿ ನಡೆಯಿತು. ಸಂಜೆ ಅಯ್ಯಪ್ಪ ಸ್ವಾಮಿ ವ್ರತಾಧಾರಿಗಳಿಂದ ಮಂಡಲಪೂಜೆ, ದೇವರ ಕೀರ್ತನೆ ಭಜನೆ, ಮಹಾಪೂಜಾ ಸೇವೆ ಬಳಿಕ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು. ಪೂಜಾ ಕಾರ್ಯಕ್ರಮದಲ್ಲಿ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಆಡಳಿತ ಮಂಡಳಿಯ ಸದಸ್ಯರುಗಳು, ಅಧಿಕ ಸಂಖ್ಯೆಯಲ್ಲಿ ಅಯ್ಯಪ್ಪ ಸ್ವಾಮಿ ವ್ರತಾಧಾರಿಗಳು ಹಾಜರಿದ್ದರು. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.