ಶನಿವಾರಸಂತೆ, ಡಿ. 30: ಶನಿವಾರಸಂತೆಯ ಶ್ರೀ ವಿಘ್ನೇಶ್ವರ ಬಾಲಕಿಯರ ಪ್ರೌಢಶಾಲೆ ಮತ್ತು ಕಾಲೇಜು ವಿಭಾಗಕ್ಕೆ ಶನಿವಾರಸಂತೆ ಪೊಲೀಸ್ ಠಾಣಾ ವತಿಯಿಂದ ಅಪರಾಧ ತಡೆ ಮಾಸಾಚರಣೆ ಸಂಬಂಧ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.

ಶ್ರೀ ವಿಘ್ನೇಶ್ವರ ಬಾಲಕಿಯರ ಪ್ರೌಢಶಾಲೆಯಲ್ಲಿ ನಡೆದ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪೊಲೀಸ್ ಠಾಣಾಧಿಕಾರಿ ಹೆಚ್.ಎಂ. ಮರಿಸ್ವಾಮಿ ಪ್ರಥಮ ಬಹುಮಾನ ಪಡೆದ ವಿದ್ಯಾರ್ಥಿನಿ ಇಂಚರ, ದ್ವಿತೀಯ ಬಹುಮಾನ ಪಡೆದ ಸಮೀರ, ತೃತೀಯ ಬಹುಮಾನ ಪಡೆದ ಮೈತ್ರಿ ಹಾಗೂ ಸಮಾಧಾನಕರ ಬಹುಮಾನ ಪಡೆದ ನಿಶ್ಚಿತ ಮತ್ತು ಅನ್ವಿತ ಅವರುಗಳಿಗೆ ಪೊಲೀಸ್ ಇಲಾಖೆ ವತಿಯಿಂದ ಬಹುಮಾನ ವಿತರಿಸಿದರು.

ಅಪರಾಧ ತಡೆಗಟ್ಟುವ ಕುರಿತು ಪ್ರಥಮ ಬಹುಮಾನ ಪಡೆದ ವಿದ್ಯಾರ್ಥಿನಿಯ ಕೌಶಲ್ಯವನ್ನು ಮೆಚ್ಚಿ ವೈಯಕ್ತಿಕವಾಗಿ ನಗದು ಬಹುಮಾನ ವಿತರಿಸಿ ಪ್ರೋತ್ಸಾಹಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜು ಪ್ರಾಂಶುಪಾಲ ಟಿ.ಪಿ. ಶಿವಪ್ರಕಾಶ್, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಬಿ.ಸಿ. ಶಶಿ, ಶಿಕ್ಷಕರುಗಳು, ಪತ್ರಕರ್ತ ನರೇಶ್, ಪೊಲೀಸ್ ಸಿಬ್ಬಂದಿಗಳಾದ ಸವಿತಾ, ಸಂತೋಷ್, ಪ್ರದೀಪ್‍ಕುಮಾರ್, ಶಫೀರ್, ವಿದ್ಯಾರ್ಥಿಗಳು ಉಪಸ್ಥಿತರಿದ್ದು, ಶಿಕ್ಷಕ ಕೆ.ಪಿ. ಜಯಕುಮಾರ್ ಸ್ವಾಗತಿಸಿ, ವಂದಿಸಿದರು.