ಮಡಿಕೇರಿ, ಡಿ. 30: ಪ್ರವಾಸೋದ್ಯಮ ಇಲಾಖೆಯು ವಿದ್ಯಾವಂತ ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗ ಕಲ್ಪಿಸಿಕೊಡಲು ಪ್ರವಾಸಿಟ್ಯಾಕ್ಸಿ ಯೋಜನೆಯಡಿ ಫಲಾನುಭವಿಗಳಿಗೆ ಪ್ರವಾಸಿಟ್ಯಾಕ್ಸಿ ಖರೀದಿಸಲು ಸಹಾಯಧನದ ನೆರವು ನೀಡಲು ಉದ್ದೇಶಿಸಲಾಗಿದೆ. ಅದರಂತೆ ವಿವಿಧ ಯೋಜನಾ ವರ್ಷಗಳಲ್ಲಿ ಬಾಕಿ ಉಳಿದಿರುವ ಒಟ್ಟು 19 ಫಲಾನುಭವಿಗಳನ್ನು ಆಯ್ಕೆ ಮಾಡುವ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

2018-19ನೇ ಸಾಲಿನಲ್ಲಿ ರೂ.3 ಲಕ್ಷ, 2016-17ನೇ ಸಾಲಿನಲ್ಲಿ ರೂ.2 ಲಕ್ಷ ಹಾಗೂ 2009-10ನೇ ಸಾಲಿನಲ್ಲಿ ರೂ.1.80 ಲಕ್ಷಗಳ ಸಹಾಯಧನದೊಂದಿಗೆ ಪ್ರವಾಸಿ ಟ್ಯಾಕ್ಸಿ ವಿತರಿಸಲಾಗುವದು. ಪ್ರವಾಸಿ ಟ್ಯಾಕ್ಸಿ ಯೋಜನೆಯ ವಿವಿಧ ವರ್ಷಗಳಲ್ಲಿ ಬಾಕಿ ಉಳಿದಿರುವ ಪ್ರವಾಸಿ ಟ್ಯಾಕ್ಸಿ ಫಲಾನುಭವಿಗಳು ಪರಿಶಿಷ್ಟ ಪಂಗಡ: ಒಟ್ಟು-05 (ವೀರಾಜಪೇಟೆ ತಾಲೂಕು, 2009-10-02, 2016-17-02, 2018-19-01), ಹಿಂದುಳಿದ ವರ್ಗ:-ಒಟ್ಟು-14 (2016-17ನೇ ಸಾಲಿನಲ್ಲಿ ಪ್ರವರ್ಗ-1-02, 2ಎ-12,)

ಪ್ರವಾಸಿಟ್ಯಾಕ್ಸಿಗೆ ತಗಲುವ ಒಟ್ಟು ವೆಚ್ಚದಲ್ಲಿ ಶೇ.5ರಷ್ಟು ಮೊತ್ತವನ್ನು ಫಲಾನುಭವಿಯೇ ಭರಿಸುವದು ಮತ್ತು ಒಟ್ಟು ಕಾರಿನ ಬೆಲೆಯ ಉಳಿಕೆ ಮೊತ್ತವನ್ನು ಬ್ಯಾಂಕ್ ಸಾಲದ ಮುಖಾಂತರ ಭರಿಸಿ ಪ್ರವಾಸಿಟ್ಯಾಕ್ಸಿ ವಿತರಿಸಲು ಯೋಜನೆಯನ್ನು ರೂಪಿಸಲಾಗಿದೆ. ಪರಿಶಿಷ್ಟ ಪಂಗಡದ ಮತ್ತು ಹಿಂದುಳಿದ ವರ್ಗದ ಫಲಾನುಭವಿಗಳನ್ನು ಪ್ರವರ್ಗವಾರು ಆಯ್ಕೆ ಮಾಡಲಾಗುವದು. ಫಲಾನುಭವಿಗಳ ಆಯ್ಕೆ ಮಾಡುವ ಸಂಬಂಧ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ತೀರ್ಮಾನ ಅಂತಿಮವಾಗಿರುತ್ತದೆ.

ಫಲಾನುಭವಿಗಳು ಪರಿಶಿಷ್ಟ ಪಂಗಡ ಅಥವಾ ಹಿಂದುಳಿದ ವರ್ಗಕ್ಕೆ ಸೇರಿದವರಾಗಿರಬೇಕು. 20 ರಿಂದ 40 ವರ್ಷದೊಳಗಿರಬೇಕು. ಆದರೆ 2009-10ನೇ ಸಾಲಿನಲ್ಲಿ ಬಾಕಿ ಉಳಿದಿರುವ ಪ್ರವಾಸಿ ಟ್ಯಾಕ್ಸಿಗೆ ಅರ್ಜಿ ಸಲ್ಲಿಸಲು ವಯೋಮಿತಿ 20 ರಿಂದ 45 ವರ್ಷಗಳು (ವಯೋಮಿತಿಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ: 14.1.2019 ಕ್ಕೆ ಅನ್ವಯಿಸುವಂತೆ). ಈ ಯೋಜನೆಗೆ ಮಹಿಳಾ ಅಭ್ಯರ್ಥಿಗಳು ಅರ್ಹರು. ಅರ್ಜಿದಾರರು ಕನಿಷ್ಟ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. 2016-17 ಮತ್ತು 2018-19ನೇ ಸಾಲಿನ ಬಾಕಿ ಫಲಾನುಭವಿಗಳ ಆಯ್ಕೆ ಸಂದರ್ಭದಲ್ಲಿ ಅರ್ಹತಾ ಪರೀಕ್ಷೆಯಲ್ಲಿ ಪಡೆದಿರುವ ಅಂಕಗಳು ಹಾಗೂ ವಯೋಮಿತಿ ಪರಿಗಣಿಸಲಾಗುವದು. ಲಘುವಾಹನ ಚಾಲನಾ ಪರವಾನಿಗೆ ಪಡೆದು ಕನಿಷ್ಟ ಒಂದು ವರ್ಷ ಪೂರ್ಣಗೊಂಡಿರಬೇಕು ಹಾಗೂ ಲಘುವಾಹನ ಚಾಲನ ಬ್ಯಾಡ್ಜನ್ನು ಹೊಂದಿರಬೇಕು. (2009-10ನೇ ಸಾಲಿಗೆ ಅನ್ವಯಿಸುವದಿಲ್ಲ). ಅರ್ಜಿದಾರರು ಕೊಡಗು ಜಿಲ್ಲೆಯ ನಿವಾಸಿಯಾಗಿರಬೇಕು. ಅರ್ಜಿದಾರರು ಅಥವಾ ಅವರ ಕುಟುಂಬದ ಯಾವೊಬ್ಬ ಸದಸ್ಯರು ಯಾವದೇ ಸರ್ಕಾರಿ, ಅರೆ ಸರ್ಕಾರಿ ಇಲಾಖೆಯಲ್ಲಿ ಅಥವಾ ನಿಗಮ ಮಂಡಳಿಗಳಲ್ಲಿ ಖಾಯಂ ನೌಕರಿಯಲ್ಲಿರಬಾರದು. ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಸದರಿ ಯೋಜನೆಯ ಪ್ರಯೋಜನ ಪಡೆಯಲು ಅವಕಾಶವಿರುತ್ತದೆ. ವಾರ್ಷಿಕ ಆದಾಯದ ಮಿತಿ: ಪರಿಶಿಷ್ಟ ಪಂಗಡ ನಗರ ಪ್ರದೇಶದ ಅಭ್ಯರ್ಥಿಗಳಿಗೆ ರೂ.2 ಲಕ್ಷ ಹಾಗೂ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ರೂ.1.50 ಲಕ್ಷಗಳು.

ವಾರ್ಷಿಕ ಆದಾಯದ ಮಿತಿ ಹಿಂದುಳಿದ ವರ್ಗಕ್ಕೆ ನಗರ ಪ್ರದೇಶದ ಅಭ್ಯರ್ಥಿಗಳಿಗೆ ರೂ.55 ಸಾವಿರ ಹಾಗೂ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ರೂ.40 ಸಾವಿರ ಆಗಿರಬೇಕು.

ಅರ್ಜಿದಾರರು ಅರ್ಜಿಯೊಂದಿಗೆ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರುವ ಅಂಕಪಟ್ಟಿ, ಪಡಿತರ ಚೀಟಿ ಹಾಗೂ ಆಧಾರ್ ಕಾರ್ಡ್. ಪರಿಶಿಷ್ಟ ಪಂಗಡ ಅಥವಾ ಹಿಂದುಳಿದ ವರ್ಗಕ್ಕೆ ಸೇರಿರುವ ಬಗ್ಗೆ ತಹಶೀಲ್ದಾರರಿಂದ ಪಡೆದುಕೊಂಡಿರುವ ಚಾಲ್ತಿಯಲ್ಲಿರುವ ಜಾತಿ ಪ್ರಮಾಣ ಪತ್ರ ಹಾಗೂ ಪ್ರಸಕ್ತ ಸಾಲಿನ ಆದಾಯ ಪ್ರಮಾಣಪತ್ರ. ತಹಶೀಲ್ದಾರ್, ಮಹಾನಗರಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ, ಇವುಗಳಲ್ಲಿ ಅರ್ಜಿದಾರರಿಗೆ ಅನ್ವಯಿಸುವವರಿಂದ ಪಡೆದಿರುವ ವಾಸಸ್ಥಳ ದೃಢಿಕರಣ ಪತ್ರ.

ನಗರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿ-ಇವುಗಳಿಂದ ಈ ರೀತಿಯ ಸೌಲಭ್ಯ ಪಡೆಯದೇ ಇರುವ ಬಗ್ಗೆ ಅವರಿಂದ ಪಡೆದಿರುವ ಪ್ರಸಕ್ತ ಸಾಲಿನ ದೃಡೀಕರಣ ಪತ್ರ. ಪರಿಶಿಷ್ಟ ಪಂಗಡದ ಅಭಿವೃದ್ದಿ ನಿಗಮ, ಡಿ. ದೇವರಾಜು ಅರಸು ಅಭಿವೃದ್ದಿ ನಿಗಮ ಇವುಗಳಿಂದ ಈ ರೀತಿಯ ಸೌಲಭ್ಯ ಪಡೆಯದೇ ಇರುವ ಬಗ್ಗೆ ದೃಢೀಕರಣ ಪತ್ರ. ಬ್ಯಾಡ್ಜ್ ಹೊಂದಿರುವ ಲಘು ವಾಹನ ಚಾಲನಾ ಪರವಾನಿಗೆ ಹಾಗೂ ಆರ್.ಟಿ.ಓ ರವರಿಂದ ಪಡೆದಿರುವ ಡಿ.ಎಲ್ ಎಕ್ಷ್‍ಟ್ರಾಕ್ಟ್‍ನ ಪ್ರತಿಗಳು.

ಅರ್ಜಿದಾರರು ಕೇಂದ್ರ, ರಾಜ್ಯ ಸರ್ಕಾರಗಳ ಇಲಾಖೆಗಳಲ್ಲಿ ಅಥವಾ ನಿಗಮ ಮಂಡಳಿಗಳಲ್ಲಿ ಖಾಯಂ ಉದ್ಯೋಗ ಹೊಂದಿರದ ಬಗ್ಗೆ ಮತ್ತು ಅರ್ಜಿದಾರರ ಕುಟುಂಬದಲ್ಲಿ ಯಾವೊಬ್ಬ ಸದಸ್ಯನು ಸರ್ಕಾರಿ ನೌಕರಿ ಹೊಂದಿಲ್ಲದ ಬಗ್ಗೆ ತಹಶೀಲ್ದಾರ್ ಪಡೆದಿರುವ ಪ್ರಸಕ್ತ ಸಾಲಿನ ನಿರುದ್ಯೋಗ ಪ್ರಮಾಣಪತ್ರ. ರೂ.50 ಬೆಲೆಯ ಛಾಪಾ ಕಾಗದದಲ್ಲಿ (ನಮೂನೆ-3 ರಂತೆ) ಸ್ವಯಂ ದೃಢೀಕರಿಸಿ ದ್ವಿಪ್ರತಿಗಳಲ್ಲಿ ಸಲ್ಲಿಸಬೇಕು.

ಅರ್ಹ ಅಭ್ಯರ್ಥಿಗಳು ಅರ್ಜಿ ನಮೂನೆಗಳನ್ನು ಸಹಾಯಕ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಸ್ಟೀವರ್ಟ್ ಹಿಲ್ ರಸ್ತೆ, ಮಡಿಕೇರಿ, ಇವರಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಜನವರಿ, 14 ರ ಸಂಜೆ 5 ಗಂಟೆಯೊಳಗೆ ಸಲ್ಲಿಸಲು ತಿಳಿಸಿದೆ. ಹೆಚ್ಚಿನ ವಿವರಗಳಿಗೆ ಸಹಾಯಕ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಮಡಿಕೇರಿ ಇವರನ್ನು ಸಂಪರ್ಕಿಸಬಹುದು ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಅಪ್ರೆಂಟಿಷಿಪ್ ತರಬೇತಿಗೆ

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಇವರ ವತಿಯಿಂದ ಡಿಪ್ಲೊಮಾ ಪಾಸಾದ ಅಭ್ಯರ್ಥಿಗಳಿಂದ ಅಪ್ರೆಂಟಿಷಿಪ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಡಿಪ್ಲೋಮಾ ಇನ್ ಏರೋನಾಟಿಕ್ ಇಂಜಿನಿಯರಿಂಗ್, ಡಿಪ್ಲೊಮಾ ಇನ್ ಮೆಕ್ಯಾನಿಕಲ್ ಇಂಜಿನಿಯರಿಂಗ್, ಡಿಪ್ಲೊಮಾ ಇನ್ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಡಿಪ್ಲೊಮಾ ಇನ್ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಶನ್ ಇಂಜಿನಿಯರಿಂಗ್, ಡಿಪ್ಲೊಮಾ ಇನ್ ಸಿವಿಲ್ ಇಂಜಿನಿಯರಿಂಗ್, ಡಿಪ್ಲೊಮಾ ಇನ್ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್/ ಇನ್‍ಫಾರ್ಮೇಶನ್ ಸೈನ್ಸ್ ಮತ್ತು ಇಂಜಿನಿಯರಿಂಗ್, ಡಿಪ್ಲೊಮಾ ಇನ್ ಮೆಟಾಲರ್ಜಿ ಇಂಜಿನಿಯರಿಂಗ್ ಮತ್ತು ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್. ಈ ಟ್ರೇಡ್‍ಗಳಲ್ಲಿ ಡಿಪ್ಲೊಮಾ ತೇರ್ಗಡೆ ಹೊಂದಿರುವಂತಹ ಅಭ್ಯರ್ಥಿಗಳು ತಿತಿತಿ.ಚಿಠಿಠಿಡಿeಟಿಣiಛಿeshiಠಿ.gov.iಟಿ ವೆಬ್‍ಸೈಟ್‍ನಲ್ಲಿ ಆನ್‍ಲೈನ್ ಮೂಲಕ ನೋಂದಾಯಿಸಿ, ನೋಂದಣಿ ಸಂಖ್ಯೆಯನ್ನು ನಿಗದಿತ ಅರ್ಜಿ ನಮೂನೆಯಲ್ಲಿ ನಮೂದಿಸಿ, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ, ಅಂತಿಮ ದಿನಾಂಕದೊಳಗೆ ಜಿಲ್ಲಾ ಉದ್ಯೋಗ ವಿನಿಯಮ ಕಚೇರಿ, ಮಡಿಕೇರಿ ಇಲ್ಲಿಗೆ ಸಲ್ಲಿಸುವದು.

ಲಗತ್ತಿಸಬೇಕಾದ ದಾಖಲೆಗಳು ಡಿಪ್ಲೊಮಾ ಅಂಕಪಟ್ಟಿ, ಪ್ರಾವಿಷನಲ್ ಅಂಕಪಟ್ಟಿಯ ಪ್ರತಿ. ಜಾತಿ ಪ್ರಮಾಣ ಪತ್ರ, ಅಂಗವಿಕಲತೆಯ ಪ್ರಮಾಣ ಪತ್ರ, ಸೇನಾ ಪ್ರಮಾಣ ಪತ್ರದ ಪ್ರತಿ. ಆಧಾರ್ ಕಾರ್ಡಿನ ಪ್ರತಿ. ಅರ್ಜಿ ಸಲ್ಲಿಸಲು 2019ರ ಜನವರಿ 10 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿ ಹಾಗೂ ವಿವರಗಳಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಡಿಕೇರಿ, ದೂ.ಸಂ.08272-225851 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.