ಕುಶಾಲನಗರ, ಜ. 3: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಇಂದು (3 ರಂದು) ಕುಶಾಲನಗರದ ಶ್ರೀ ಅಯ್ಯಪ್ಪಸ್ವಾಮಿ ದೇವಾಲಯ ಸ್ವಚ್ಛತೆ ಮತ್ತು ಕಾವೇರಿ ನದಿ ಸ್ವಚ್ಛತೆ ಕಾರ್ಯಕ್ರಮ ನಡೆಯಲಿದೆ.

ಸ್ಥಳೀಯ ಶ್ರೀ ಅಯ್ಯಪ್ಪಸ್ವಾಮಿ ದೇವಾಲಯ, ಕಾವೇರಿ ನದಿ ಸ್ವಚ್ಛತಾ ಆಂದೋಲನ, ಪಟ್ಟಣ ಪಂಚಾಯ್ತಿ ಕುಶಾಲನಗರ ಸಹಯೋಗದೊಂದಿಗೆ ಯೋಜನೆಯ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಸಂಯುಕ್ತಾಶ್ರಯದಲ್ಲಿ ನಡೆಯುವ ಕಾರ್ಯಕ್ರಮ ಸಂಜೆ 4 ಗಂಟೆಗೆ ನಡೆಯಲಿದ್ದು ಕಿರಿಕೊಡ್ಲಿ ಮಠಾಧೀಶರಾದ ಶ್ರೀ ಸದಾಶಿವ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ ಎಂದು ಯೋಜನೆಯ ಕುಶಾಲನಗರ ಮೇಲ್ವಿಚಾರಕರಾದ ಹರೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.