ಕೂಡಿಗೆ, ಜ. 2: ಕೂಡುಮಂಗಳೂರು ಗ್ರಾಮ ಪಂಚಾಯಿತಿಯ ಮಾಸಿಕ ಸಭೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮಿ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಹಾಜರಿದ್ದ ಸದಸ್ಯರು ತಮ್ಮ ವಾರ್ಡ್‍ಗಳ ಮೂಲ ಸೌಕರ್ಯಗಳ ಬಗ್ಗೆ ಚರ್ಚೆ ನಡೆಸಿದರು. ಅಲ್ಲದೆ ವಸತಿ ರಹಿತರಿಗೆ ವಸತಿ ಒದಗಿಸುವ ಬಗ್ಗೆ ಹಾಗೂ ಮನೆಗಳು ಇಲ್ಲದವರಿಗೆ ಮನೆ ಒದಗಿಸುವ ಬಗ್ಗೆ ಸಭೆಯಲ್ಲಿ ಪ್ರಸ್ತಾಪ ಮಾಡಲಾಯಿತು.

14ನೇ ಹಣಕಾಸಿನ ಯೋಜನೆಗಳ ಬಗ್ಗೆ ಚರ್ಚಿಸಲಾಯಿತು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಯಿಸಾ ಸರಕಾರದ ಯೋಜನೆಗಳನ್ನು ಸಭೆಗೆ ತಿಳಿಸಿದರು. ಸಭೆಯಲ್ಲಿ ಉಪಾಧ್ಯಕ್ಷ ಸಣ್ಣಪ್ಪ ಸೇರಿದಂತೆ ಸದಸ್ಯರು ಹಾಜರಿದ್ದರು.