ಮಡಿಕೇರಿ, ಜ. 2: ಸರಕಾರಿ ಪ್ರಥಮ ದರ್ಜೆ ಕಾಲೇಜು, ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಯುವ ಸ್ಪಂದನ ವತಿಯಿಂದ ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ಹಾಗೂ ಪ್ರಬಾರ ಪ್ರಾಂಶುಪಾಲ ಪ್ರೊ. ಶಶಿಧರ ಬಿ.ಆರ್. ವಹಿಸಿದ್ದರು. ಸಂಪನ್ಮೂಲ ವ್ಯಕ್ತಿ ಯುವ ಪರಿವರ್ತಕ ಪುಟ್ಟರಾಜು ಮಾತನಾಡಿದರು. ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಪ್ರಕಾಶ್‍ರವರು ಉಪಸ್ಥಿತರಿದ್ದರು. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಡಾ. ದಯಾನಂದ ನಿರೂಪಿಸಿ, ಸ್ವಾಗತಿಸಿ, ವಂದಿಸಿದರು.