ಸೋಮವಾರಪೇಟೆ, ಜ. 2: ಇಲ್ಲಿನ ಶ್ರೀ ನಾರಾಯಣಗುರು ಸೇವಾ ಸಮಿತಿಯ 19ನೇ ವರ್ಷದ ವಾರ್ಷಿಕ ಮಹಾಸಭೆ ಹಾಗೂ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣಾ ಕಾರ್ಯಕ್ರಮ ತಾ.13ರಂದು ಪಟ್ಟಣದ ಮಾನಸ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಮಿತಿ ಪ್ರ. ಕಾರ್ಯದರ್ಶಿ ಬಿ.ಜಿ. ಇಂದಿರಾ ರಮೇಶ್ ತಿಳಿಸಿದ್ದಾರೆ.

ಅಂದು ಬೆಳಗ್ಗೆ 10.30ಕ್ಕೆ ಆರಂಭವಾಗುವ ಮಹಾಸಭೆಯ ಅಧ್ಯಕ್ಷತೆಯನ್ನು ಸಮಿತಿಯ ಅಧ್ಯಕ್ಷ ಬಿ.ಎ. ಭಾಸ್ಕರ್ ವಹಿಸಲಿದ್ದಾರೆ. ಸಭೆಯಲ್ಲಿ ಸಂಘದ ಸದಸ್ಯತ್ವ ಪಡೆದ ಸದಸ್ಯರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಸಂಘದ ವಿದ್ಯಾನಿಧಿಯಿಂದ ಪ್ರೋತ್ಸಾಹ ಧನ ವಿತರಣೆ ಮಾಡಲಾಗುವದು.

2017-18ನೇ ಶೈಕ್ಷಣಿಕ ಸಾಲಿನಲ್ಲಿ ನಡೆದ ಎಸ್‍ಎಸ್‍ಎಲ್‍ಸಿ, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲಿದ್ದು, ಅರ್ಹರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವವರು ಸಂಘದ ಸದಸ್ಯತ್ವ ಪಡೆದಿರುವವರ ಮಕ್ಕಳಾಗಿರಬೇಕು. ಅರ್ಹರು ದೃಢೀಕರಿಸಿದ ಅಂಕಪಟ್ಟಿ ಯೊಂದಿಗೆ ಸ್ವವಿವರಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ತಾ. 11 ಕೊನೆ ದಿನಾಂಕವಾಗಿದ್ದು, ಹೆಚ್ಚಿನ ಮಾಹಿತಿಗಾಗಿ 9731503131 ಅಥವಾ 9972717450 ರಲ್ಲಿ ಸಂಪರ್ಕಿಸಬಹುದೆಂದು ಇಂದಿರಾ ತಿಳಿಸಿದ್ದಾರೆ.