ಸೋಮವಾರಪೇಟೆ,ಜ.2: ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಕಾರ್ಯಕಾರಣಿ ಸಭೆ ತಾ.6ರಂದು ಬೆಳಿಗ್ಗೆ 10.30ಕ್ಕೆ ಗುಡುಗಳಲೆ ಜಾತ್ರಾ ಮೈದಾನದಲ್ಲಿರುವ ಬಸವೇಶ್ವರ ದೇವಾಲಯದಲ್ಲಿ ಜಿಲ್ಲಾ ಘಟಕದ ಅಧ್ಯಕ್ಷ ಡಿ.ಬಿ.ಧರ್ಮಪ್ಪ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಮಹಾಸಭಾದ ಕೇಂದ್ರ ಕಚೇರಿಯ ತೀರ್ಮಾನದಂತೆ ಜಿಲ್ಲಾ ಮತ್ತು ತಾಲೂಕು ಘಟಕದ ಚುನಾವಣೆ ಪಕ್ರಿಯೆ ತಾ.23 ರಿಂದ ಪ್ರಾರಂಭವಾಗಲಿದ್ದು, ಚುನಾವಣೆಯ ಕುರಿತೂ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಎಂ. ಕಾಂತರಾಜ್ ತಿಳಿಸಿದ್ದಾರೆ.