ಮಡಿಕೇರಿ, ಜ. 2: ಬೆಂಗಳೂರಿನ ರಾಷ್ಟ್ರೀಯ ಸಂತ ಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ ಹಾಗೂ ವೀರಾಜಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜು ಇವುಗಳ ಆಶ್ರಯದಲ್ಲಿ ತಾ. 4 ರಂದು (ನಾಳೆ) ಕನಕದಾಸ ಮತ್ತು ಅಪ್ಪಚ್ಚಕವಿ ಅಧ್ಯಯನ ವಿಚಾರ ಸಂಕಿರಣ ವೀರಾಜಪೇಟೆ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದೆ. ಬೆಳಿಗ್ಗೆ 11 ಗಂಟೆಗೆ ಉದ್ಘಾಟನೆಯನ್ನು ರಾ.ಸಂ.ಕ.ಅ. ಕೇಂದ್ರದ ಸಮನ್ವಯಾಧಿಕಾರಿ ಕಾ.ತ. ಚಿಕ್ಕಣ್ಣ ನೆರವೇರಿಸಲಿದ್ದು, ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ಟಿ.ಕೆ. ಬೋಪಯ್ಯ ವಹಿಸುವರು. ಅತಿಥಿಯಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಅಡ್ಡಂಡ ಸಿ. ಕಾರ್ಯಪ್ಪ ಪಾಲ್ಗೊಳ್ಳುವರು.