ಕೂಡಿಗೆ, ಜ. 1: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಂದರ ನಗರ ಗ್ರಾಮದಲ್ಲಿ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯ ವತಿಯಿಂದ 22 ನೇ ವರ್ಷದ ವಾರ್ಷಿಕೋತ್ಸವ ಮತ್ತು ಮಂಡಲ ಪೂಜೋತ್ಸವವು ಅಯ್ಯಪ್ಪ ಸ್ವಾಮಿ ದೇವಾಲಯದ ಆವರಣದಲ್ಲಿ ನಡೆಯಿತು.
ಇದರ ಅಂಗವಾಗಿ ಗಣಪತಿ ಹೋಮ, ಮಹಾ ಮಂಗಳಾರತಿ, ಅನ್ನ ಸಂತರ್ಪಣೆ, ಪಾಲ್ಕೊಂಬ್ ಉತ್ಸವ, ಕೊಂಡ ಹಾಯುವದು. ಸೇರಿದಂತೆ ಪೂಜಾ ಕಾರ್ಯಕ್ರಮಗಳು ನಡೆದವು.
ಈ ಪೂಜೋತ್ಸವದಲ್ಲಿ ಸುಂದರ ನಗರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಅನೇಕ ಭಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.