ಮಡಿಕೇರಿ, ಜ. 2: ನಗರದ ರಾಜಾಸೀಟು ರಸ್ತೆಯಲ್ಲಿ ಸಂಚಾರಕ್ಕೆ ಕಿಷ್ಕಿಂದೆಯಾಗಿರುವ ಸ್ಥಳದಲ್ಲಿ ರಸ್ತೆ ಅಗಲೀಕರಣ ಕಾಮಗಾರಿಗೆ ಇಂದು ನಗರಸಭೆ ಚಾಲನೆ ನೀಡಿದೆ. ಮೂರು ದಿನಗಳಲ್ಲಿ ಕಾಮಗಾರಿ ಪೂರ್ಣಗೊಳಿಸಲು ನಿರ್ಧರಿಸಲಾಗಿದೆ ಎಂದು ನಗರಸಭಾಧ್ಯಕ್ಷೆ ಕಾವೇರಮ್ಮ ಸೋಮಣ್ಣ ತಿಳಿಸಿದ್ದಾರೆ.