ಮಡಿಕೇರಿ, ಜ. 1: ಕರ್ನಾಟಕ ಸರಕಾರ ರಾಜ್ಯದಲ್ಲಿ ಸಂಕಷ್ಟದಲ್ಲಿರುವ ರೈತರು, ಷೆಡ್ಯೂಲ್ ವಾಣಿಜ್ಯ ಬ್ಯಾಂಕ್‍ಗಳು ಮತ್ತು ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‍ಗಳಿಂದ ಪಡೆದಿರುವ ಬೆಳೆ ಸಾಲ ಮನ್ನಾ ಯೋಜನೆಯನ್ನು ಜಾರಿಗೆ ತಂದಿದ್ದು, ಇದರ ಅನುಷ್ಠಾನಕ್ಕಾಗಿ ರಾಜ್ಯಮಟ್ಟದಲ್ಲಿ, ಜಿಲ್ಲಾಮಟ್ಟದಲ್ಲಿ ಮತ್ತು ತಾಲೂಕುಮಟ್ಟದಲ್ಲಿ ಸಮಿತಿಯನ್ನು ರಚಿಸಿ ರಾಜ್ಯ ಸರಕಾರದಿಂದ ಆದೇಶವಾಗಿರುತ್ತದೆ. ಈ ಸಂಬಂಧ ರೈತರಿಗೆ ಸ್ವಯಂ ದೃಢೀಕರಣ ಪತ್ರ ನೀಡಿ ನೋಂದಾಯಿಸಲು ತಿಳಿಸಲಾಗಿದೆ. ಈ ಬಗ್ಗೆ ಪ್ರಕಟಣೆ ನೀಡಿರುವ ಜಿಲ್ಲಾಧಿಕಾರಿ ಶ್ರೀವಿದ್ಯಾ ಅವರು, ಬೆಳೆ ಸಾಲ ಮನ್ನಾ ಯೋಜನೆಯಡಿ ರೈತರು ತಮ್ಮ ಸ್ವಯಂ ದೃಢೀಕರಣ ಪತ್ರ (Seಟಜಿ ಆeಛಿಟಚಿಡಿಚಿಣioಟಿ ಅeಡಿಣiಜಿiಛಿಚಿಣe)ನ್ನು ನೋಂದಾಯಿಸಿಕೊಳ್ಳಲು ಸಾಕಷ್ಟು ಸಮಯಾವಕಾಶ ನಿಗದಿಪಡಿಸಿದ್ದು, ತಾ. 1.4.2009 ರಿಂದ 31.12.2017 ರವರೆಗೆ ಅನ್ವಯಿಸುವಂತೆ ಬೆಳೆ ಸಾಲ ಪಡೆದ ಪ್ರತಿಯೊಬ್ಬ ರೈತರು ತಾವು ಸಾಲ ಪಡೆದ ವಾಣಿಜ್ಯ ಬ್ಯಾಂಕ್‍ಗಳಿಗೆ ಅಥವಾ ಹತ್ತಿರದ ನಾಡಕಚೇರಿಗೆ ಬಂದು ತಾ. 3.1.2019 ರ ಸಂಜೆ 4 ಗಂಟೆಯೊಳಗೆ ತಮ್ಮ ಸ್ವಯಂ ದೃಢೀಕರಣ ಪತ್ರ (Seಟಜಿ ಆeಛಿಟಚಿಡಿಚಿಣioಟಿ ಅeಡಿಣiಜಿiಛಿಚಿಣe)ನ್ನು ನೋಂದಾಯಿಸಿಕೊಳ್ಳಬೇಕಾಗಿದೆ.

ಪ್ರತಿಯೊಬ್ಬ ಬೆಳೆ ಸಾಲ ಪಡೆದ ರೈತರು ಕಡ್ಡಾಯವಾಗಿ ತಮ್ಮ ಆಧಾರ್ ಕಾರ್ಡ್, ರೇಷನ್ ಕಾರ್ಡ್ ನಕಲು ಪ್ರತಿಗಳನ್ನು ಮತ್ತು ತಾವು ಸಾಲ ಪಡೆದ ಸರ್ವೆ ನಂಬರ್‍ನ ಮಾಹಿತಿ ತಪ್ಪದೇ ಸಲ್ಲಿಸುವದು. (ಪಹಣಿ ಪತ್ರಿಕೆ ಸಲ್ಲಿಸುವ ಅವಶ್ಯಕತೆ ಇರುವದಿಲ್ಲ) ಎಂದು ತಿಳಿಸಿದ್ದಾರೆ.