ಮಡಿಕೇರಿ, ಜ. 3: ಕೆದಮುಳ್ಳೂರು ಗ್ರಾಮ ಪಂಚಾಯಿತಿಗೆ ಸಂಬಂಧಿಸಿದಂತೆ ವಿಶೇಷ ಗ್ರಾಮಸಭೆಯನ್ನು ಆಯಾ ವಾರ್ಡಿನ ಸದಸ್ಯರ ಅಧ್ಯಕ್ಷತೆಯಲ್ಲಿ ನಡೆಸಲು ತೀರ್ಮಾನಿಸಿದೆ.

ತಾ.7ರಂದು ಕೊಟ್ಟೋಳಿ ಸ.ಕಿ.ಪ್ರಾ.ಶಾಲೆಯಲ್ಲಿ ಎಂ.ಎಂ. ಇಸ್ಮಾಯಿಲ್ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ 11 ಗಂಟೆಗೆ, ತಾ. 7ರಂದು ಪಾಲಂಗಾಲ ಸ.ಕಿ.ಪ್ರಾ.ಶಾಲೆಯಲ್ಲಿ ಕರಿನೆರವಂಡ ಎನ್. ಕಾರ್ಯಪ್ಪ ಅಧ್ಯಕ್ಷತೆಯಲ್ಲಿ ಅಪರಾಹ್ನ 3 ಗಂಟೆಗೆ, ತಾ. 8ರಂದು ತೋಮರ ಸ.ಹಿ.ಪ್ರಾ.ಶಾಲೆಯಲ್ಲಿ ಕೆ.ಆರ್. ರೋಹಿಣಿ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ 11 ಗಂಟೆಗೆ, ತಾ. 9ರಂದು ಕೆದಮುಳ್ಳೂರು ಕ್ರಿಶ್ಚಿಯನ್ ಕಾಲೋನಿ ಅಂಗನವಾಡಿ ಕೇಂದ್ರದಲ್ಲಿ ಎಂ.ಎಂ. ಪರಮೇಶ್ವರ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ 11 ಗಂಟೆಗೆ ಸಭೆ ನಡೆಯುವದಾಗಿ ಗ್ರಾ.ಪಂ. ಪ್ರಕಟಣೆ ತಿಳಿಸಿದೆ.