ಶನಿವಾರಸಂತೆ, ಜ. 3: ಶನಿವಾರಸಂತೆ ಸಮೀಪದ ಗುಡುಗಳಲೆ ಬಳಿ ಬಸ್ಸಿಗಾಗಿ ಕಾಯುತ್ತಿದ್ದ ಮೂದರವಳ್ಳಿ ಗ್ರಾಮದ ಮೋಹನ್‍ದಾಸ್ ಎಂಬವರಿಗೆ ಕಿತ್ತೂರು ಗ್ರಾಮದ ಮೂರ್ತಿ ಎಂಬಾತ ಕಾರ್‍ನಲ್ಲಿ ಬಂದು ಕ್ಷುಲ್ಲಕ ಕಾರಣಕ್ಕಾಗಿ ಕಲ್ಲಿನಿಂದ ಹೊಡೆದು ಕೊಲೆ ಬೆದರಿಕೆ ಹಾಕಿದ ಪ್ರಕರಣ ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಠಾಣಾಧಿಕಾರಿ ಹೆಚ್.ಎಂ. ಮರಿಸ್ವಾಮಿ ಕಾರನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.