ಮಡಿಕೇರಿ, ಜ. 3: ಪ್ರಸಕ್ತ ಸಾಲಿನಲ್ಲಿ ಕೊಡಗು ಜಿಲ್ಲಾ ಪೊಲೀಸ್ ಘಟಕದಲ್ಲಿ ಖಾಲಿ ಇರುವ 22 ಸಶಸ್ತ್ರ ಪೊಲೀಸ್ ಕಾನ್ಸೆಟೇಬಲ್ ಹುದ್ದೆಗಳ ನೇರ ನೇಮಕಾತಿ ಸಂಬಂಧ ಅರ್ಹಗೊಂಡ ಅಭ್ಯರ್ಥಿಗಳಿಗೆ ತಾ. 7 ರಂದು ಬೆಳಿಗ್ಗೆ 7.30 ಗಂಟೆಯಿಂದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ದೇಹದಾಢ್ರ್ಯತೆ ಮತ್ತು ಸಹಿಷ್ಣುತೆ ಪರೀಕ್ಷೆಗಳನ್ನು ನಡೆಸಲಾಗುವದು. ಈ ಬಗ್ಗೆ ಅರ್ಹ ಅಭ್ಯರ್ಥಿಗಳು ತಾ. 7 ರಂದು ಈ ಪರೀಕ್ಷೆಗೆ ಕೇಳಲಾಗಿರುವ ಎಲ್ಲಾ ದಾಖಲಾತಿಗಳೊಂದಿಗೆ ತಪ್ಪದೇ ಹಾಜರಾಗುವಂತೆ ಪೊಲೀಸ್ ಅಧೀಕ್ಷಕರು ಮತ್ತು ಪೊಲೀಸ್ ನೇಮಕಾತಿ ಸಮಿತಿಯ ಅಧ್ಯಕ್ಷರು ತಿಳಿಸಿದ್ದಾರೆ.