ಶನಿವಾರಸಂತೆ, ಜ. 4: ಪಟ್ಟಣದ ಭಾರತಿ ವಿದ್ಯಾಸಂಸ್ಥೆ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ವಿಶೇಷ ಶಿಬಿರ ತಾ. 5 ರಿಂದ (ಇಂದಿನಿಂದ) 11 ರವರೆಗೆ 7 ದಿನಗಳ ಕಾಲ ಹಂಡ್ಲಿ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆಯಲಿದೆ. ತಾ. 5 ರಂದು ಮಧ್ಯಾಹ್ನ 2.30ಕ್ಕೆ ಶಿಬಿರವನ್ನು ಮುದ್ದಿನಕಟ್ಟೆ ಮಠದ ಶ್ರೀ ಅಭಿನವಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ ಉದ್ಘಾಟಿಸಲಿದ್ದಾರೆ. ವಿದ್ಯಾಸಂಸ್ಥೆ ಅಧ್ಯಕ್ಷ ಎ.ಎಂ. ಆನಂದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಜಿ.ಪಂ. ಸದಸ್ಯ ಪುಟ್ಟರಾಜು, ತಾ.ಪಂ. ಸದಸ್ಯ ಕುಶಾಲಪ್ಪ ಮೊದಲಾದವರು ಪಾಲ್ಗೊಳ್ಳಲಿದ್ದಾರೆ.