ಮಡಿಕೇರಿ, ಜ. 5: ಕಾವೇರಿ ನದಿ ನೇರವಾಗಿ ಕಲುಷಿತಗೊಳ್ಳುವದನ್ನು ತಪ್ಪಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಪ್ರತಿ ಪಂಚಾಯಿತಿಗಳ ಮೂಲಕ ವಿಶೇಷ ಕಾರ್ಯಯೋಜನೆ ರೂಪಿಸಲು ಚಿಂತನೆ ಹರಿಸಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ. ಲಕ್ಷ್ಮಿಪ್ರಿಯ ತಿಳಿಸಿದ್ದಾರೆ.

ಕಾವೇರಿ ನದಿ ಸ್ವಚ್ಛತಾ ಆಂದೋಲನಾ ಸಮಿತಿ ಮೂಲಕ ನದಿ ಸಂರಕ್ಷಣೆ ಬಗ್ಗೆ ಮನವಿ ಸಲ್ಲಿಸಿದ ಸಂದರ್ಭ ಪ್ರತಿಕ್ರಿಯಿಸಿದ ಅವರು, ಪ್ರವಾಸಿ ಕೇಂದ್ರಗಳಲ್ಲಿ ಜಲಮೂಲಗಳ ಸ್ವಚ್ಛತೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಸಂಬಂಧಿಸಿದ ಗ್ರಾಮ ಪಂಚಾಯಿತಿ ಗಳಿಗೆ ಸೂಚನೆ ನೀಡಲಾಗಿದೆ. ಹೊರ ಜಿಲ್ಲೆಯ ಪ್ರವಾಸಿಗರಿಗೆ ಜಿಲ್ಲೆಯ ಆಯ್ದ ಕೆಲವು ಜಾಗಗಳಲ್ಲಿ ವಿಶ್ರಾಂತಿ ಘಟಕಗಳನ್ನು ನಿರ್ಮಿಸುವ ಬಗ್ಗೆ ಜಿಲ್ಲಾಡಳಿತ ಚಿಂತನೆ ಹೊಂದಿದ್ದು ಇಂತಹ ಕೇಂದ್ರಗಳಲ್ಲಿ ಪ್ರವಾಸಿಗರಿಗೆ ಅಡುಗೆ ಮಾಡಿಕೊಳ್ಳಲು ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಲಭ್ಯ ಗಳನ್ನು ಕಲ್ಪಿಸಲಾಗುವದು ಎಂದಿದ್ದಾರೆ.

ಇತ್ತೀಚಿನ ದಿನಗಳಲ್ಲಿ ರಾಜ್ಯದ ಎಲ್ಲೆಡೆಯಿಂದ ಜಿಲ್ಲೆಗೆ ಭೇಟಿ ನೀಡುವ ಶಾಲಾ ಮಕ್ಕಳು ಮತ್ತು ಜಿಲ್ಲೆಯಲ್ಲಿರುವ ಕೆಲವು ಜಾಗಗಳಲ್ಲಿ ವಿಶ್ರಾಂತಿ ಘಟಕಗಳನ್ನು ನಿರ್ಮಿಸುವ ಬಗ್ಗೆ ಜಿಲ್ಲಾಡಳಿತ ಚಿಂತನೆ ಹೊಂದಿದ್ದು ಇಂತಹ ಕೇಂದ್ರಗಳಲ್ಲಿ ಪ್ರವಾಸಿಗರಿಗೆ ಅಡುಗೆ ಮಾಡಿಕೊಳ್ಳಲು ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಲಭ್ಯ ಗಳನ್ನು ಕಲ್ಪಿಸಲಾಗುವದು ಎಂದಿದ್ದಾರೆ.

ಇತ್ತೀಚಿನ ದಿನಗಳಲ್ಲಿ ರಾಜ್ಯದ ಎಲ್ಲೆಡೆಯಿಂದ ಜಿಲ್ಲೆಗೆ ಭೇಟಿ ನೀಡುವ ಶಾಲಾ ಮಕ್ಕಳು ಮತ್ತು ಜಿಲ್ಲೆಯಲ್ಲಿರುವ ಎಲ್ಲಾ ಗ್ರಾಮ ಪಂಚಾಯಿತಿ ಅಧಿಕಾರಿಗಳ ಸಭೆ ಕರೆದು ಚರ್ಚಿಸಲಾಗುವದು. ನದಿಯ ಸ್ವಚ್ಛತೆ ಮತ್ತು ಸಂರಕ್ಷಣೆಗೆ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುವದು. ನದಿ ಕಲುಷಿತಗೊಳ್ಳಲು ಕಾರಣವಾಗುತ್ತಿರುವ ನದಿ ತಟದಲ್ಲಿರುವ ಶುಂಠಿ ಕಾರ್ಖಾನೆಗಳು ಮತ್ತಿತರ ಅಕ್ರಮ ಘಟಕಗಳ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲಾಗುವದು ಎಂದು ಲಕ್ಷ್ಮಿಪ್ರಿಯ ಭರವಸೆ ನೀಡಿದ್ದಾರೆ.

ಈ ಸಂದರ್ಭ ಗ್ರೀನ್ ಸಿಟಿ ಫೋರಂ ಸ್ಥಾಪಕ ಅಧ್ಯಕ್ಷ ಚೈಯಂಡ ಸತ್ಯ, ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಂಚಾಲಕ ಎಂ.ಎನ್. ಚಂದ್ರಮೋಹನ್, ಪ್ರಮುಖರಾದ ಕೆ.ಆರ್. ಶಿವಾನಂದನ್, ಅಕ್ಷಯ್ ಪನ್ಯಾಡಿ ಇದ್ದರು.