ಮಡಿಕೇರಿ, ಜ. 4: ಪೊನ್ನಂಪೇಟೆ ತಾಲೂಕು ರಚನೆ ಹೋರಾಟದ ಬಗ್ಗೆ ಚರ್ಚಿಸಲು ಪೊನ್ನಂಪೇಟೆ ತಾಲೂಕು ಹೋರಾಟ ಸಮಿತಿ ಮತ್ತು ಪೊನ್ನಂಪೇಟೆ ನಾಗರಿಕ ವೇದಿಕೆಯ ಆಶ್ರಯದಲ್ಲಿ ತಾ.7 ರಂದು ಪೂರ್ವಾಹ್ನ 11.30 ಗಂಟೆಗೆ ಪೊನ್ನಂಪೇಟೆ ಕೊಡವ ಸಮಾಜದ ರಿಕ್ರಿಯೇಷನ್ ಕ್ಲಬ್ ಸಬಾಂಗಣದಲ್ಲಿ ಸಾರ್ವಜನಿಕ ಸಭೆಯನ್ನು ಏರ್ಪಡಿಸಿದ್ದು, ಅಧ್ಯಕ್ಷತೆಯನ್ನು ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ವಹಿಸಲಿದ್ದಾರೆ.