ಮಡಿಕೇರಿ, ಜ. 5 : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಕ್ಷಯರೋಗ ನಿಯಂತ್ರಣ ವಿಭಾಗ ವತಿಯಿಂದ ಮೂರ್ನಾಡು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಾರ್ವಜನಿಕರಿಗೆ, ಸಿಬ್ಬಂದಿ ವರ್ಗದವರಿಗೆ, ಆಶಾ ಕಾರ್ಯ ಕರ್ತರಿಗೆ, ಶಾಲಾ-ಕಾಲೇಜು ಮಕ್ಕಳಿಗೆ ಸಕ್ರೀಯ ಕ್ಷಯರೋಗ ಪತ್ತೆ ಹಚ್ಚುವದು, ಚಿಕಿತ್ಸೆ, ಆಂದೋಲನ ಬಗ್ಗೆ ಕಾರ್ಯಕ್ರಮ ನಡೆಯಿತು.

ಮೂರ್ನಾಡು ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ.ಎನ್.ಎಸ್.ಶಾಲಿನಿ ಅಧ್ಯಕ್ಷತೆ ವಹಿಸಿದ್ದರು. ಪಿ.ಯು. ಕಾಲೇಜಿನ ಪ್ರಾಂಶುಪಾಲೆ ಪಿ.ಜಿ.ಕಲಾವತಿ, ಸರ್ಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿ ಎಸ್.ಎಂ. ದೇಚಮ್ಮ ಉದ್ಘಾಟಿಸಿದರು. ಮಹದೇವಪ್ಪ ಉಪನ್ಯಾಸ ನೀಡಿದರು. ಸಿಬ್ಬಂದಿ ವರ್ಗದವರು, ಆಶಾ ಕಾರ್ಯ ಕರ್ತೆಯರು, ಶಾಲಾ ಕಾಲೇಜು ಮಕ್ಕಳು ಇತರರು ಇದ್ದರು. ಮರಗೋಡು ಕಿ.ಮ.ಆ.ಸ ಕುಸುಮ ಸ್ವಾಗತಿಸಿದರು.