ಕುಶಾಲನಗರ, ಜ. 5: ರಾಷ್ಟ್ರೀಯ ಕ್ಷಯರೋಗ ಪತ್ತೆ ಆಂದೋಲನ ಸಂಬಂಧ ಕುಶಾಲನಗರ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ತಾಲೂಕು ಆರೋಗ್ಯಾಧಿಕಾರಿ ಡಾ. ರವಿಕುಮಾರ್, ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮ ಅಧಿಕಾರಿಗಳಾದ ಡಾ. ಆನಂದ್, ಡಾ. ಜಯರಾಜ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕ್ಷಯರೋಗದ ಲಕ್ಷಣ ಬಂದಲ್ಲಿ ಈ ಬಗ್ಗೆ ಪರಿಶೀಲನೆ ನಡೆಸುವದರೊಂದಿಗೆ ಚಿಕಿತ್ಸೆ ನೀಡಲಾಗುವದು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ರವಿಕುಮಾರ್ ತಿಳಿಸಿದ್ದಾರೆ. ತಾಲೂಕಿನಾದ್ಯಂತ 16302 ಮನೆಗಳಿಗೆ ಭೇಟಿ ಮಾಡಿ ಅಂದಾಜು 62 ಸಾವಿರ ರೋಗಿಗಳನ್ನು ತಪಾಸಣೆ ಮಾಡಲು ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.