ಮಡಿಕೇರಿ, ಜ. 4: ದೇಶವ್ಯಾಪ್ತಿ ವಿವಿಧ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ಇದೇ ತಾ. 8 ಹಾಗೂ 9 ರಂದು ಸಾರ್ವತ್ರಿಕ ಮುಷ್ಕರ ನಡೆಸುವ ಸಲುವಾಗಿ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಕಾರ್ಮಿಕ ಹಿತ ಕಾಪಾಡಲು ಆಗ್ರಹಿಸಲಾಗಿದೆ.

ಆ ದಿಸೆಯಲ್ಲಿ ಜಿಲ್ಲೆಯಲ್ಲಿಯೂ ಕೂಡ ಮುಷ್ಕರ ಬಗ್ಗೆ ಅರಿವು ಮೂಡಿಸಲು ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯಿಂದ ಪ್ರಚಾರ ಆಂದೋಲನ ಹಮ್ಮಿಕೊಳ್ಳಲಾಗಿದೆ. ಈ ಸಂಬಂಧ ಕಾರ್ಮಿಕ ಮುಖಂಡ ಭರತ್, ಹಿರಿಯ ಕಾಂಗ್ರೆಸ್ಸಿಗ ಟಿ.ಪಿ. ರಮೇಶ್ ಮೊದಲಾದವರು ಅಲ್ಲಲ್ಲಿ ಪ್ರಚಾರ ಸಭೆಗಳನ್ನು ನಡೆಸಿ ಹೋರಾಟ ಬೆಂಬಲಿಸಲು ಕಾರ್ಮಿಕರಲ್ಲಿ ಅರಿವು ಮೂಡಿಸುತ್ತಿದ್ದಾರೆ. ಇಂದು ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಈ ಸಂಬಂಧ ಪ್ರಚಾರಕ್ಕೆ ಚಾಲನೆ ನೀಡಲಾಯಿತು.