ಮಡಿಕೇರಿ ಜ.4 : ಕೊಡವ ಕುಲಶಾಸ್ತ್ರ ಅಧ್ಯಯನಕ್ಕೆ ಮರು ಚಾಲನೆ ನೀಡಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಕೆ.ಪಿ.ಸಿ.ಸಿ. ಹಿರಿಯ ಉಪಾಧ್ಯಕ್ಷ ಬೊಟ್ಟೊಳಂಡ ಮಿಟ್ಟು ಚಂಗಪ್ಪ ಅವರು ಸ್ವಾಗತಿಸಿದ್ದಾರೆ.

ಕೊಡವ ಜನಾಂಗದ ಉಳಿವು ಮತ್ತು ಪರಂಪರೆಯ ಬೆಳವಣಿಗೆಗೆ ಕುಲಶಾಸ್ತ್ರ ಅಧ್ಯಯನ ಪೂರಕವಾಗಿದ್ದು, ಈ ಪ್ರಕ್ರಿಯೆಗೆ ಮರುಜೀವ ನೀಡಿದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಸಮನ್ವಯ ಸಮಿತಿ ಅಧಕ್ಷ ಸಿದ್ದರಾಮಯ್ಯ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವÀ ಪ್ರಿಯಾಂಕ ಖರ್ಗೆ ಅಭಿನಂದನಾರ್ಹರು ಎಂದು ಪತ್ರಿಕಾ ಹೇಳಿಕೆಯಲ್ಲಿ ಅವರು ತಿಳಿಸಿದ್ದಾರೆ.