ಮಡಿಕೇರಿ, ಜ. 6: ನಗರದ ಶ್ರೀ ಮುತ್ತಪ್ಪ ದೇವಾಲಯ ಆವರಣದ ಶ್ರೀ ಅಯ್ಯಪ್ಪ ದೇವಸ್ಥಾನದಲ್ಲಿ ತಾ. 14 ರಂದು ಮಕರ ಸಂಕ್ರಾಂತಿ ಪ್ರಯುಕ್ತ ವಿಶೇಷ ಪೂಜೆಯೊಂದಿಗೆ ದೇವತಾ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಅಂದು ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 8 ಗಂಟೆಯ ತನಕ ವಿಶೇಷ ಪೂಜೆ, ಭಜನೆ, ದೀಪಾರಾಧನೆ ನೆರವೇರಲಿದೆ. ಮಧ್ಯಾಹ್ನ ಮಹಾಪೂಜೆ ಬಳಿಕ ಅನ್ನಸಂತರ್ಪಣೆ ಜರುಗಲಿದೆ. ಈ ಪ್ರಯುಕ್ತ ತಾ. 13 ರಂದು ಸನ್ನಿಧಿಯಲ್ಲಿ ಉಷಾಕಾಲ 6.30 ರಿಂದ ಧಾರ್ಮಿಕ ಪೂಜೆಗಳು ಜರುಗಲಿವೆ.