ವೀರಾಜಪೇಟೆ, ಜ. 6: ಯುವಕರು ಒಗ್ಗಟ್ಟಾಗಿ ದೃಢ ಸಂಕಲ್ಪ ಮಾಡಿ ಮುಂದುವರಿದರೆ ದೇಶದ ಬಹುತೇಕ ಸಮಸ್ಯೆಗಳು ನಿವಾರಣೆಯಾದಂತಾಗುವದು ಎಂದು ವೀರಾಜಪೇಟೆ ಕಾವೇರಿ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಸಿ.ಎಂ. ನಾಚಪ್ಪ ಅಭಿಪ್ರಾಯಪಟ್ಟರು.

ಕಂಡಂಗಾಲದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕಾವೇರಿ ಪದವಿ ಕಾಲೇಜಿನ ಎನ್‍ಎಸ್‍ಎಸ್ ಘಟಕದ ವಾರ್ಷಿಕ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿ, ಪ್ರತಿ ವ್ಯಕ್ತಿಯು ದೇಶ ಹಾಗೂ ಸಂಸ್ಕøತಿಯ ಕುರಿತು ಗಂಭೀರವಾಗಿ ಚಿಂತಿಸುವಂತಾಗಬೇಕು ಎಂದರು.

ಶಿಬಿರಕ್ಕೆ ಚಾಲನೆ ನೀಡಿದ ಪುಚ್ಚಿಮಂಡ ಎಂ. ಬೆಳ್ಯಪ್ಪ ಮಾತನಾಡಿ, ವಿದ್ಯಾರ್ಥಿಗಳು ದುಶ್ಚಟಗಳನ್ನು ದೂರ ಮಾಡಿದರೆ ಬದುಕಿನಲ್ಲಿ ಯಶಸ್ಸು ಸಾಧಿಸಬಹುದು ಎಂದು ಹೇಳಿದರು.

ಅತಿಥಿಯಾಗಿ ಭಾಗವಹಿಸಿದ್ದ ಮುಲ್ಲೆಂಗಡ ಬೇಬಿ ಚೋಂದಮ್ಮ ಮಾತನಾಡಿ, ನಮ್ಮ ದೇಶದಲ್ಲಿರುವ ಸಂಸ್ಕøತಿ ಹಾಗೂ ವೈವಿದ್ಯತೆಯನ್ನು ಬೇರೆ ಯಾವದೇ ದೇಶದಲ್ಲಿ ಕಾಣಲು ಸಾಧ್ಯವಿಲ್ಲ ಎಂದು ಹೇಳಿದರು.

ಇದೇ ಸಮಾರಂಭದಲ್ಲಿ ಅಪ್ಪಚ್ಚ ಕವಿಯನ್ನು ಪರಿಚಯಿಸಿದ ಮುಲ್ಲೇಂಗಡ ಶಂಕರಿ ಪೊನ್ನಪ್ಪ ಅವರನ್ನು ಸನ್ಮಾನಿಸಲಾಯಿತು.