ಮಡಿಕೇರಿ, ಜ. 6: ಮೂರ್ನಾಡುವಿನ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಎಫೆಕ್ಟಿವ್ ಬಿಸಿನೆಸ್ ಕಮ್ಯೂನಿಕೇಷನ್’ ಉಪನ್ಯಾಸ ಕಾರ್ಯಕ್ರಮ ಜರುಗಿತು. ಸ್ವರ್ಧಾತ್ಮಕ ಜಗತ್ತಿನಲ್ಲಿ ಗ್ರಾಮೀಣ ವಿದ್ಯಾರ್ಥಿಗಳು ಪಾಲುಗೊಳ್ಳುವಾಗ ಶೈಕ್ಷಣಿಕ ಕಲಿಕೆಯೊಂದೆ ಸಾಲದು ಜೊತೆಗೆ ಇನ್ನಷ್ಟು ಹೆಚ್ಚಿನ ಕಲಿಕೆಯ ಅಗತ್ಯವಿದೆ ಎಂಬ ನಿಟ್ಟಿನಲ್ಲಿ ಬೆಂಗಳೂರಿನ ಅಂತರರಾಷ್ಟ್ರೀಯ ಕಂಪೆನಿಯಲ್ಲಿ ಮೆಡಿಕಲ್ ರೈಟಿಂಗ್ ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಬಡುವಂಡ ದಿವ್ಯ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದರು. ದ್ವಿತೀಯ ಹಾಗೂ ತೃತೀಯ ಬಿಕಾಂ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾದ ಈ ಕಾರ್ಯಕ್ರಮದಲ್ಲಿ ತಮ್ಮ ಭವಿಷ್ಯದಲ್ಲಿ ಉತ್ತಮ ನೆಲೆಕಂಡುಕೊಳ್ಳಬೇಕಾದರೆ ಯಾವೆಲ್ಲ ಮಾನದಂಡಗಳು ಬೇಕಾಗುತ್ತವೆ ಎಂಬದನ್ನು ವಿವರಿಸಿದರು. ಪ್ರಾಯೋಗಿಕ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳ ಗಮನ ಸೆಳೆದದ್ದು ಶ್ಲಾಘನೀಯವಾಗಿತ್ತು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಪಟ್ಟಡ ಪೂವಣ್ಣ ಹಾಗೂ ಉಪನ್ಯಾಸಕ ವರ್ಗದವರು ಹಾಜರಿದ್ದರು.