ಮಡಿಕೇರಿ, ಜ. 6: ರಾಜ್ಯಾದ್ಯಂತ ಕಾರ್ಯ ನಿರ್ವಹಿಸುತ್ತಿರುವ ಗ್ರಂಥಾಲಯ ಮೇಲ್ವಿಚಾರಕರಿಗೆ ಕನಿಷ್ಟ ವೇತನ ಮತ್ತು ತುಟ್ಟಿಭತ್ಯೆಯನ್ನು ನೀಡಬೇಕೆಂದು ಒತ್ತಾಯಿಸಿರುವ ಜಿಲ್ಲಾ ಗ್ರಾ.ಪಂ. ಗ್ರಂಥಾಲಯ ಮೇಲ್ವಿಚಾರಕರ ಸಂಘ ತಾ. 8 ಮತ್ತು 9 ರಂದು ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ರಾಷ್ಟ್ರವ್ಯಾಪಿ ನಡೆಸುತ್ತಿರುವ ಮುಷ್ಕರಕ್ಕೆ ಬೆಂಬಲ ಸೂಚಿಸಿದೆ.