ಕುಶಾಲನಗರ, ಜ. 6: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಆಶ್ರಯದಲ್ಲಿ ಕುಶಾಲನಗರ ಆದರ್ಶ ದ್ರಾವಿಡ ಕಾಲನಿಯ ಶ್ರದ್ಧಾ ಕೇಂದ್ರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಯೋಜನೆಯ ಮೇಲ್ವಿಚಾರಕ ಹರೀಶ್ ನೇತೃತ್ವದಲ್ಲಿ ಕಾಲೋನಿಯ ಪಟ್ಟಾಲಮ್ಮ ದೇವಾಲಯದ ಆವರಣ ಮತ್ತು ಸುತ್ತಮುತ್ತ ಕಾರ್ಯಕರ್ತರು ಸ್ವಚ್ಛತೆ ನಡೆಸಿದರು.

ಯೋಜನೆಯ ಸೇವಾ ಪ್ರತಿನಿಧಿಗಳಾದ ಡಾಟಿ, ವಿಜಯಲಕ್ಷ್ಮಿ, ಸಂಘದ ಪದಾಧಿಕಾರಿಗಳು, ಸದಸ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.