ಸಿದ್ದಾಪುರ, ಜ. 7: ಸಿದ್ದಾಪುರದಲ್ಲಿ ನೆಲ್ಯಹುದಿಕೇರಿಯ ಶ್ರೀ ಅಯ್ಯಪ್ಪ ಸೇವಾ ಸಮಿತಿ ವತಿಯಿಂದ ಶಬರಿಮಲೆಯ ಶ್ರೀ ಅಯ್ಯಪ್ಪ ಕ್ಷೇತ್ರಕ್ಕೆ ಮಹಿಳೆಯರು ಪ್ರವೇಶ ಮಾಡಿದನ್ನು ಖಂಡಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದ ಸಂದರ್ಭ ಸಿಪಿಐ(ಎಂ) ಪಕ್ಷದ ವತಿಯಿಂದ ಹಮ್ಮಿಕೊಂಡಿರುವ ಕಾರ್ಮಿಕರ ಮುಷ್ಕರದ ಕರಪತ್ರಗಳನ್ನು ಪ್ರತಿಭಟನಾಕಾರರು ಹರಿದು, ಬೆಂಕಿ ಹಚ್ಚಿ ಸುಟ್ಟಿದ್ದಾರೆ ಎಂದು ಸಿಪಿಐ(ಎಂ) ಪಕ್ಷದ ಗ್ರಾಮ ಸಮಿತಿ ಕಾರ್ಯದರ್ಶಿ ಎನ್.ಡಿ ಕುಟ್ಟಪ್ಪ ಹಿಂದೂಪರ ಸಂಘಟನೆಗಳ ಕೆಲವರ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.