ಮಡಿಕೇರಿ, ಜ. 8: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಇವರ ಸಂಯುಕ್ತ ಆಶ್ರಯದಲ್ಲಿ ತಾ. 10 ರಂದು ಬೆಳಿಗ್ಗೆ 10.30 ಗಂಟೆಗೆ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಸಭಾಂಗಣದಲ್ಲಿ ಮಹಿಳಾ ಸಹಕಾರ ಸಂಘಗಳ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು ಮತ್ತು ಕಾರ್ಯದರ್ಶಿಗೆ ಸಂಘಗಳ ಅಭಿವೃದ್ಧಿ ಹಾಗೂ ಸಹಕಾರ ಕಾಯ್ದೆ, ನಿಯಮದ ಕುರಿತು ತರಬೇತಿ ಕಾರ್ಯಕ್ರಮ ನಡೆಯಲಿದೆ.

ಸೋಮವಾರಪೇಟೆ ಶ್ರೇಷ್ಠ ಮಹಿಳಾ ಸಹಕಾರಿ ಪ್ರಶಸ್ತಿ ಪುರಸ್ಕøತರಾದ ಉಷಾ ತೇಜಸ್ವಿ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕ ಅಪ್ಪಚೆಟ್ಟೋಳಂಡ ಕೆ. ಮನು ಮುತ್ತಪ್ಪ ಇತರರು ಪಾಲ್ಗೊಳ್ಳಲಿದ್ದಾರೆ.