ಗೋಣಿಕೊಪ್ಪಲು, ಜ. 8: ಹಾತೂರು ಗ್ರಾ.ಪಂ. ವ್ಯಾಪ್ತಿಯ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಿರ್ಮಾಣವಾದ ಅಂಬೇಡ್ಕರ್ ಭವನವನ್ನು ಶಾಸಕ ಕೆ.ಜಿ. ಬೋಪಯ್ಯ ಉದ್ಘಾಟಿಸಿದರು.
ರೂ. 10 ಲಕ್ಷ ವೆಚ್ಚದಲ್ಲಿ ನಿರ್ಮಿತಿ ಕೇಂದ್ರ ವತಿಯಿಂದ ಕಾಲೋನಿಯ ನಿವಾಸಿಗಳಿಗೆ ಸಣ್ಣಪುಟ್ಟ ಕಾರ್ಯಕ್ರಮಗಳನ್ನು ನಡೆಸಲು ಅನುಕೂಲವಾಗುವಂತೆ ಭವನ ನಿರ್ಮಿಸಲಾಗಿದೆ. ಇದರ ಸದುಪಯೋಗವನ್ನು ನಿವಾಸಿಗಳು ಪಡೆದುಕೊಳ್ಳಬೇಕು ಎಂದರು.
ಹಾತೂರು ಗ್ರಾ.ಪಂ. ಅಧ್ಯಕ್ಷೆ ಬಿ.ಎನ್ ಜಯಂತಿ, ಜಿ.ಪಂ. ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಸಿ.ಕೆ. ಬೋಪಣ್ಣ ತಾ.ಪಂ. ಸದಸ್ಯ ಜಯ ಪೂವಯ್ಯ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಉಪಾಧ್ಯಕ್ಷ ಚಿಯಾಕ್‍ಪೂವಂಡ, ಸುಬ್ರಮಣಿ, ಹಾತೂರು ಗ್ರಾ.ಪಂ. ಸದಸ್ಯ ಗಿರೀಶ್ ಪೂವಣ್ಣ, ಜಮ್ಮುಡ ಕವಿತ, ಹೆಚ್.ಎಸ್. ಮೀರಾ, ತಾಲೂಕು ಸಮಾಜ ಕಲ್ಯಾಣ ಅಧಿಕಾರಿ ಪ್ರಿಯಾ ಮಳವಳ್ಳಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ತಿಮ್ಮಯ್ಯ, ಪ್ರಮುಖರಾದ ಕೊಕ್ಕಂಡ ಕುಶಾ, ಕೊಡೆಂದೆರ ಸುಬ್ಬಯ್ಯ, ಗ್ರಾ.ಪಂ. ಮಾಜಿ ಸದಸ್ಯೆ ಮುತ್ತಮ್ಮ, ಶಾಸಕರ ಆಪ್ತ ಕಾರ್ಯದರ್ಶಿ ಮಲ್ಲಂಡ ಮಧು ದೇವಯ್ಯ, ಗುತ್ತಿಗೆದಾರ ಮನು ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.