ಸೋಮವಾರಪೇಟೆ, ಜ. 8: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮದ ಅಂಗವಾಗಿ ಸೋಮವಾರಪೇಟೆ ಎ ಒಕ್ಕೂಟದ ವತಿಯಿಂದ ಇಲ್ಲಿನ ಸೋಮೇಶ್ವರ ದೇವಾಲಯದಲ್ಲಿ ಶುಚಿತ್ವ ಕಾರ್ಯ ನಡೆಯಿತು.

ಒಕ್ಕೂಟದ ಸದಸ್ಯರುಗಳು ಸೋಮೇಶ್ವರ ದೇವಾಲಯದ ಆವರಣವನ್ನು ಶ್ರಮದಾನದ ಮೂಲಕ ಶುಚಿಗೊಳಿಸಿದರು. ದೇವಾಲಯದ ಆವರಣವನ್ನು ತೊಳೆದು ಶುಭ್ರಗೊಳಿಸಿದರು.

ಈ ಸಂದರ್ಭ ಮಾತನಾಡಿದ ವಲಯ ಮೇಲ್ವಿಚಾರಕ ರಮೇಶ್, ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಯೋಜನೆಯು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಸಂಘದ ಸದಸ್ಯರುಗಳ ಶ್ರೇಯೋಭಿವೃದ್ಧಿಯೊಂದಿಗೆ ಶ್ರದ್ಧಾಕೇಂದ್ರಗಳ ಶುಚಿತ್ವದತ್ತಲೂ ಗಮನಹರಿಸುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಯೋಜನೆಯ ಸೇವಾ ಪ್ರತಿನಿಧಿ ತಾರಾಲಕ್ಷ್ಮೀ, ದೇವಾಲಯ ಸಮಿತಿ ಅಧ್ಯಕ್ಷ ಶ್ರೀನಿವಾಸ್, ಮಾಜಿ ಅಧ್ಯಕ್ಷ ಸೋಮೇಶ್, ಭಜನಾ ಮಂಡಳಿ ಅಧ್ಯಕ್ಷೆ ಪಂಕಜಾ ಶ್ಯಾಂಸುಂದರ್, ಸುಮಾ ಚಿರಂಜೀವಿ ಸೇರಿದಂತೆ ಇತರರು ಭಾಗವಹಿಸಿದ್ದರು.