ಮಡಿಕೇರಿ, ಜ. 8: 2018ನೇ ಸಾಲಿನಲ್ಲಿ ಕೊಡಗು ಜಿಲ್ಲಾ ಪೊಲೀಸ್ ಘಟಕದಲ್ಲಿ ಖಾಲಿ ಇರುವ 22 ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳಿಗೆ 2018 ರ ಆಗಸ್ಟ್ 5 ರಂದು ಲಿಖಿತ ಪರೀಕ್ಷೆಯನ್ನು ನಡೆಸಲಾಗಿತ್ತು. ಅದರಲ್ಲಿ ಅರ್ಹಗೊಂಡ ಅಭ್ಯರ್ಥಿಗಳಿಗೆ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ದೇದಾಡÀ್ರ್ಯತೆ ಮತ್ತು ಸಹಿಷ್ಣುತೆ ಪರೀಕ್ಷೆಗಳನ್ನು ನಡೆಸಲಾಯಿತು.

2018ನೇ ಸಾಲಿನ ಪೊಲೀಸ್ ಕಾನ್ಸ್‍ಟೇಬಲ್ 22 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. 1930 ಅರ್ಜಿಗಳು ಸಲ್ಲಿಕೆಯಾಗಿದ್ದು, ಅದರಲ್ಲಿ ಲಿಖಿತ ಪರೀಕ್ಷೆಯಲ್ಲಿ ಆಯ್ಕೆಗೊಂಡ 110 ಅಭ್ಯರ್ಥಿಗಳಿಗೆ ವಿವಿಧ ರೀತಿಯ ದೇದಾಡ್ರ್ಯತೆ ಪರೀಕ್ಷೆಗಳು ನಡೆಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ. ಪನ್ನೇಕರ್ ಮಾಹಿತಿ ನೀಡಿದರು. ಈ ಸಂದರ್ಭ ಅಭ್ಯರ್ಥಿಗಳಿಗೆ ಲಾಂಗ್‍ಜಂಪ್, ಓಟದ ಸ್ಪರ್ಧೆ, ಇತರ ದೈಹಿಕ ಪರೀಕ್ಷೆಗಳು ನಡೆದವು. ಪೊಲೀಸ್ ಅಧಿಕಾರಿಗಳು ದೇಹದಾಢ್ರ್ಯತೆ ಮತ್ತು ಸಹಿಷ್ಣುತೆ ಪರೀಕ್ಷೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಆಯ್ಕೆ ಪ್ರಕ್ರಿಯೆ ನಡೆಸಿದರು.