ಮಡಿಕೇರಿ, ಜ. 8: ಕೊಡಗು ಬ್ಯಾರೀಸ್ ವೆಲ್ಫೇರ್ ಟ್ರಸ್ಟ್ನ ಕೊಡಗು ಜಿಲ್ಲಾ ಬ್ಯಾರಿ ಸಮಾವೇಶ ಪ್ರಯುಕ್ತ ವಿವಿಧ ಸ್ಪರ್ಧಾ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭ ಕ್ರೆಸೆಂಟ್ ಶಾಲೆಯಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೊಡಗು ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ. ಅನಂತಶಯನ ಪುಟಾಣಿ ಮಕ್ಕಳು ಚಿಕ್ಕಂದಿನಿಂದಲೇ ಆಟ ಆಡುವದನ್ನು ರೂಢಿಸಿಕೊಂಡರೆ ದೈಹಿಕ ಸ್ವಾಸ್ಥ್ಯವನ್ನು ಕಾಪಾಡಿಕೊಳ್ಳಬಹುದು ಎಂದರು.
ಆಶಯ ನುಡಿಗಳನ್ನಾಡಿದ ಕೊಡಗು ಬ್ಯಾರೀಸ್ ವೆಲ್ಫೇರ್ ಟ್ರಸ್ಟ್ ಉಪಾಧ್ಯಕ್ಷ ಮುನೀರ್ ಅಹಮ್ಮದ್, ಕೊಡಗು ಬ್ಯಾರೀಸ್ ವೆಲ್ಫೇರ್ ಟ್ರಸ್ಟ್ನ ಮುಖ್ಯ ಉದ್ದೇಶ ಜನಾಂಗ ಬಾಂಧವರನ್ನು ಮುಖ್ಯ ವಾಹಿನಿಗೆ ತರುವದಾಗಿದೆ. ಆ ನಿಟ್ಟಿನಲ್ಲಿ ಟ್ರಸ್ಟ್ ವತಿಯಿಂದ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬರುತ್ತಿದ್ದೇವೆ. ಇದರ ಪ್ರಯೋಜನವನ್ನು ಸಮಾಜ ಬಾಂಧವರು ಪಡೆದುಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಕೊಡಗು ಬ್ಯಾರೀಸ್ ವೆಲ್ಫೇರ್ ಟ್ರಸ್ಟ್ ಅಧ್ಯಕ್ಷ ಬಿ.ಎ. ಷಂಶುದ್ದೀನ್, ಪ್ರಮುಖರಾದ ನಾಸಿರ್ ಅಹಮದ್, ಮಹಮ್ಮದ್ ಆಲಿ, ಶರೀಫ್ ಮತ್ತಿತರರು ಇದ್ದರು.