ಮಡಿಕೇರಿ, ಜ. 7: ಕೊಡಗು ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪೊನ್ನಂಪೇಟೆಯಲ್ಲಿ ನಡೆಸುತ್ತಿರುವ ಬಾಲಕ, ಬಾಲಕಿಯರ ಕ್ರೀಡಾ ವಸತಿ ನಿಲಯಕ್ಕೆ 2019-20ನೇ ಸಾಲಿಗೆ ಪ್ರತಿಭಾನ್ವಿತ ಹಾಕಿ ಕ್ರೀಡಾಪಟುಗಳ ಆಯ್ಕೆಯು ತಾ. 21 ರಂದು ಸೋಮವಾರಪೇಟೆ ಸರ್ಕಾರಿ ಪ್ರಾಥಮಿಕ ಶಾಲಾ ಆಟದ ಮೈದಾನ, ತಾ. 22 ರಂದು ಮಡಿಕೇರಿ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ ಹಾಗೂ ತಾ. 23 ರಂದು ವೀರಾಜಪೇಟೆ ತಾಲೂಕು ಮಿನಿ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.