ವೀರಾಜಪೇಟೆ, ಜ. 9: ಭ್ರಷ್ಟಾಚಾರದ ಆರೋಪ ಹೊತ್ತಿರುವ ಸಮಾಜ ಕಲ್ಯಾಣ ಸಚಿವರನ್ನು ಕೂಡಲೇ ಸರ್ಕಾರದಿಂದ ಕೈಬಿಡಬೇಕು ಹಾಗೂ ಕೇರಳ ಸರ್ಕಾರ ಹಿಂದು ವಿರೋಧಿ ನೀತಿ ಅನುಸರಿಸುತ್ತಿದ್ದು ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶದ ಪ್ರಕರಣವನ್ನು ಖಂಡಿಸಿ ತಾಲೂಕು ಬಿಜೆಪಿ ಹಾಗೂ ವಿಶ್ವ ಹಿಂದೂ ಪರಿಷತ್ ವತಿಯಿಂದ ವೀರಾಜಪೇಟೆ ಶಾಸಕ ಕೆ.ಜಿ ಬೋಪಯ್ಯ ನೇತೃತ್ವದಲ್ಲಿ ಗಡಿಯಾರ ಕಂಬದ ಬಳಿ ಪ್ರತಿಭಟನೆ ನಡೆಯಿತು.
ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್‍ನ ಜಿಲ್ಲಾ ಅಧ್ಯಕ್ಷ ಮೇವಡ ಅಯ್ಯಣ್ಣ, ತಾಲೂಕು ಅಧ್ಯಕ್ಷ ಕುಟ್ಟಂಡ ಪ್ರಿನ್ಸ್ ಗಣಪತಿ, ತಾಲೂಕು ಬಿಜೆಪಿ ಪಕ್ಷದ ತಾಲೂಕು ಸಮಿತಿ ಅಧ್ಯಕ್ಷ ಅರುಣ್ ಭೀಮಯ್ಯ, ತಾಲೂಕು ಪಂಚಾಯಿತಿ ಅಧ್ಯಕ್ಷೆ ಸ್ಮಿತಾ ಪ್ರಕಾಶ್, ಜಿಲ್ಲಾ ಪಂಚಾಯಿತಿ ಸದಸ್ಯ ಶಶಿ ಸುಬ್ರಮಣಿ, ಭವ್ಯ, ತಾಲೂಕು ಪಂಚಾಯಿತಿ ಸದಸ್ಯ ಬಿ.ಎಂ ಗಣೇಶ್, ಕಾಫಿ ಮಂಡಳಿ ಉಪಾಧ್ಯಕ್ಷೆ ರೀನಾ ಪ್ರಕಾಶ್, ಪಟ್ಟಣ ಪಂಚಾಯಿತಿ ಸದಸ್ಯರುಗಳು ಹಾಜರಿದ್ದರು.