ಕೂಡಿಗೆ, ಜ. 10: ಕೂಡಿಗೆ ಗ್ರಾ.ಪಂ. ವತಿಯಿಂದ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಶೌಚಾಲಯದ ಬಗ್ಗೆ ಅರಿವು ಜಾಗೃತಿ ಕಾರ್ಯಕ್ರಮ ನಡೆಯಿತು.

ಹೊಸದಾಗಿ ನಿರ್ಮಿಸಿಕೊಳ್ಳುತ್ತಿರುವ ಗ್ರಾ.ಪಂ. ವ್ಯಾಪ್ತಿಯ 38 ಫಲಾನುಭವಿಗಳಿಗೆ ಶೌಚಾಲಯವನ್ನು ನೂತನ ಮಾದರಿಯಲ್ಲಿ ನಿರ್ಮಿಸುವ ಬಗ್ಗೆ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ವಿ.ಜೆ. ಲೋಕೇಶ್ ಮಾಹಿತಿಯನ್ನು ನೀಡಿದರು.

ಈ ಸಂದರ್ಭ ಗ್ರಾ.ಪಂ. ಅಧ್ಯಕ್ಷೆ ಪ್ರೇಮಲೀಲಾ ಸೇರಿದಂತೆ ಗ್ರಾ.ಪಂ. ಸಿಬ್ಬಂದಿ ವರ್ಗದವರು ಹಾಜರಿದ್ದರು.