ಸೋಮವಾರಪೇಟೆ, ಜ. 10: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಕರ್ನಾಟಕ ಸರ್ಕಾರ ಮತ್ತು ಸಾರ್ವಜನಿಕರ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ನಡೆದ ಜಿಲ್ಲಾಮಟ್ಟದ ವಿಜ್ಞಾನ-ಗಣಿತ ಒಲಂಪಿಯಾಡ್ ಸ್ಪರ್ಧೆಯಲ್ಲಿ ಐಗೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ 9ನೇ ತರಗತಿ ವಿದ್ಯಾರ್ಥಿನಿ ಕೆ.ಆರ್. ಹರ್ಷಿತ ಗರಿಷ್ಠ ಅಂಕಗಳನ್ನು ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ.
ರಾಜ್ಯಮಟ್ಟದ ಸ್ಪರ್ಧೆಯು ಮೈಸೂರಿನ ಲಕ್ಷ್ಮೀಪುರಂನಲ್ಲಿರುವ ಗೋಪಾಲಸ್ವಾಮಿ ಶಿಶು ವಿಹಾರ ಪದವಿಪೂರ್ವ ಕಾಲೇಜಿನಲ್ಲಿ ನಡೆಯಲಿದೆ.