ಕುಶಾಲನಗರ, ಜ. 10: ಕೊಡಗು ಜಿಲ್ಲಾ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ನಿವೃತ್ತ ಸರ್ಕಾರಿ ನೌಕರರ ಸಂಘದ ವತಿಯಿಂದ ಭಾರತದ ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಅವರ 188ನೇ ಜನ್ಮದಿನವನ್ನು ಆಚರಿಸಲಾಯಿತು. ಕುಶಾಲನಗರದ ಸಂಘದ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದ ನಿವೃತ್ತ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿದ್ಧಯ್ಯ ಸಾವಿತ್ರಿಬಾಯಿಪುಲೆ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಹೆಣ್ಣು ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದ ಕಾಲದಲ್ಲಿ ಉನ್ನತ ಮಟ್ಟದ ಶಿಕ್ಷಣ ಕಲಿತು ಶಿಕ್ಷಕಿಯಾಗಿ ತನ್ನಂತೆಯೇ ಇತರ ಹೆಣ್ಣು ಮಕ್ಕಳು ಕೂಡ ವಿದ್ಯಾವಂತರಾಗಬೇಕೆಂದು ಸಾವಿತ್ರಿಬಾಯಿ ಫುಲೆ ಕನಸು ಹೊಂದಿದ್ದವರು. ಅಜ್ಞಾನ ವಿಮೋಚನೆಗೆ ಅಕ್ಷರಕ್ರಾಂತಿ ಆರಂಭಿಸಿದ ಇವರು 1848 ರಲ್ಲಿ ತಮ್ಮ ಮನೆಯಲ್ಲಿಯೇ ಶಾಲೆಯನ್ನು ಆರಂಭಿಸುವ ಮೂಲಕ ಕ್ರಾಂತಿಕಾರಿ ಹೆಜ್ಜೆಯನ್ನಿಟ್ಟು ವಿದ್ಯಾದಾನ ಮಾಡುವ ಮೂಲಕ ಹೊಸ ಮನ್ವಂತರಕ್ಕೆ ನಾಂದಿ ಹಾಡಿದರು ಎಂದರು.
ಸಂಘದ ಉಪಾಧ್ಯಕ್ಷ ಹಾಗೂ ಸಂಘದ ಜಿಲ್ಲಾ ಮಾಧ್ಯಮ ಸಲಹೆಗಾರ ಬಿ.ಡಿ. ಅಣ್ಣಯ್ಯ ಮಾತನಾಡಿದರು.
ಈ ಸಂದರ್ಭ ಸಂಘದ ಕಾರ್ಯದರ್ಶಿ ರಾಮಯ್ಯ, ಸಹ ಕಾರ್ಯದರ್ಶಿ ಸೋಮಣ್ಣ. ಖಜಾಂಚಿ ನಿಂಗರಾಜು, ಸದಸ್ಯರಾದ ದೇವಣ್ಣ, ಜೋಯಪ್ಪ ಸರೋಜಮ್ಮ, ರಾಮಣ್ಣ, ಬೇಲೂರಯ್ಯ, ಕೇಶವಯ್ಯ, ಪುಟ್ಟಸ್ವಾಮಿ ಮತ್ತಿತರರು ಇದ್ದರು.